ವಿಜಯಪುರ
108 ಅಂಬ್ಯುಲೆನ್ಸ್ ರಸ್ತೆ ಬದಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದರಿಂದ ಅಂಬ್ಯುಲೆನ್ಸ್ ನಲ್ಲಿದ್ದ ಗರ್ಭಿಣಿ ಸ್ಥಳದಲ್ಲಧ ಮೃತಪಟ್ಟಿದ್ದು, ಅಂಬ್ಯುಲೆನ್ಸ್ ನಲ್ಲಿದ್ದ ಇಬ್ಬರು ಸ್ಟಾಫ್ ನರ್ಸ್ ಹಾಗೂ ಓರ್ವ ಸಹಾಯಕ ಗಾಯಗೊಂಡ ಘಟನೆ ನಗರ ಹೊರವಲಯದಲ್ಲಿ ನಡೆದಿದೆ.
ತಾಳಿಕೋಟೆಯ ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ (19) ಮೃತಪಟ್ಟ ಗರ್ಭಿಣಿ.
ಕಳೆದ ಒಂದೂವರೆ ವರ್ಷದ ಹಿಂದೆ ತಾಳಿಕೋಟೆ ತಾಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀ ಹಾಗೂ ರಾವುತಪ್ಪ ಜೊತೆಗೆ ವಿವಾಹವಾಗಿತ್ತು
ಮೊದಲ ಹೆರಿಗೆಗಾಗಿ ತವರು ಮನೆಗೆ ತೆರಳಿದ್ದ ಭಾಗ್ಯಶ್ರೀಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತವರು ಮನೆ ನಾವದಗಿಯಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ಬಂದಿದ್ದರು.
ಆದರೆ ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ಅಂಬ್ಯುಲನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಇದೇ ವೇಳೆ ಅಪಘಾತವಾಗಿದ್ದರಿಂದ ಗರ್ಭಿಣಿ ಅಸುನೀಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಭಾಗ್ಯಶ್ರೀ ಪೋಷಕರಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು. ವೈದ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನ
ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಕ್ಕೆ ಮೃತಳ ಪೋಷಕರ ಆಕ್ರೋಶ ವ್ಯಕ್ತಪಡಿಸಿದರು.
ತಾಳಿಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.