ನಿಮ್ಮ ಸುದ್ದಿ ಬಾಗಲಕೋಟೆ
ಎರಡು ದಿನದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕುರಿತಂತೆ ನಿಲುವು ಸ್ಪಷ್ಟಪಡಿಸದಿದ್ದರೆ ಪಾದಯಾತ್ರೆ ಅಚಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡಲು ಸರಕಾರ ನಿರ್ಧಾರ ಕೈಗೊಳ್ಳಬೇಕು. ಸರಕಾರ ನಮ್ಮ ಬೇಡಿಕೆಗೆ ಸ್ಪಂಧಿಸಿದರೆ ಅಭಿನಂದಿಸಿ ಜ.೧೪ರಂದು ವಿಜಯೋತ್ಸವ ಆಚರಿಸುತ್ತೇವೆ. ಇಲ್ಲದಿದ್ದರೆ ಕೂಡಲಸಂಗಮದಿAದ ಬೃಹತ್ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕೂಡಲಸಂಗಮದಿಂದ ಆರಂಭಗೊಳ್ಳುವ ಪಾದಯಾತ್ರೆ ಇಳಕಲ್, ಕೊಪ್ಪಳ, ಹಗರಿಬೊಮ್ಮನಹಳ್ಳಿ, ದಾವಣಗೇರೆ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರಿನತ್ತ ಸಾಗಲಿದೆ. ಅಧಿವೇಶನ ಅವಧಿಯಲ್ಲಿ ಬೆಂಗಳೂರು ತಲುಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬಳಿಯ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.