This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಕೋವಿಡ್ ನಿಂದ 300 ಜನರು ಗುಣಮುಖ

300 ಜನ ಗುಣಮುಖ, 319 ಹೊಸ ಪ್ರಕರಣ ದೃಡ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 300 ಜನ ಗುಣಮುಖರಾಗಿದ್ದು, ಹೊಸದಾಗಿ 319 ಕೊರೊನಾ ಪ್ರಕರಣಗಳು ಹಾಗೂ 3 ಮೃತ ಪ್ರಕರಣಗಳು ಶನಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 17604 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 15422 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 155, ಬಾದಾಮಿ 38, ಜಮಖಂಡಿ 15, ಹುನಗುಂದ 48, ಮುಧೋಳ 49, ಬೀಳಗಿ 14 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 5471 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 554284 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 530609 ನೆಗಟಿವ್ ಪ್ರಕರಣ, ಹಾಗೂ 152 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 2030 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‍ಗೆ ಮೂವರು ಸಾವು
——————–
ಜಿಲ್ಲೆಯಲ್ಲಿ ಕೋವಿಡ್‍ಗೆ ಮೂರು ಜನ ಸಾವನ್ನನಪ್ಪಿದ್ದಾರೆ. ಕೆರೂಡಿ ಆಸ್ಪತ್ರೆಯಲ್ಲಿ ದಾಖಲಾದ ವಿಜಯಪುರದ 56 ವರ್ಷದ ಪುರುಷ ಪಿ-1244404, ಆಲಮಟ್ಟಿಯ 46 ವರ್ಷದ ಪುರುಷ ಪಿ-1469445 ಹಾಗೂ ಇಲಕಲ್ಲಿನ 57 ವರ್ಷದ ಪುರುಷ ಪಿ-1312742 ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Nimma Suddi
";