ಶಾಸಕ ಚರಂತಿಮಠರಿಂದ ೪.೫೩ ಲಕ್ಷ ಕಾಮಗಾರಿಗೆ ಚಾಲನೆ
ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಹೋಬಳಿ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಅಂದಾಜು ೪ ಕೋಟಿ ೫೩ ಲಕ್ಷ ಕಾಮಗಾರಿಗಳಿಗೆ ನವಂಬರ್ ೩ ರಂದು ಕ್ಷೇತ್ರದ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಲಿದ್ದಾರೆ.
ಪಟ್ಟಣದ ಸಂಗಮೇಶ್ವರ ವಿದ್ಯಾವರ್ಧಕ ಸಂಘದಲ್ಲಿ ೩೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ, ೪೦ ಲಕ್ಷ ರೂ. ವೆಚ್ಚದಲ್ಲಿ ಉರ್ದು ಪ್ರಾಥಮಿಕ ಶಾಲೆ ಕಟ್ಟಡ ದುರಸ್ತಿ ಹಾಗೂ ೨೯ ಲಕ್ಷ ರೂ. ವೆಚ್ಚದಲ್ಲಿ ಬಣ್ಣದ ಮನೆ ಶಾಲೆಯಲ್ಲಿ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ, ೧೭ ಲಕ್ಷ ರೂ. ವೆಚ್ಚದಲ್ಲಿ ಎಪಿಎಂಸಿಯಲ್ಲಿ ದನಗಳ ಸಂತೆಯ ಹೊರಾಂಗಣ ಶೆಡ್ ಅಡಿಗಲ್ಲು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಪಟ್ಟಣ ಪಂಚಾಯಿತಿಯ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಸೋಲಾರ್ ಹೀಟರ್ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಐಹೊಳೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ, ಹೂವಿನಹಳ್ಳಿಯಲ್ಲಿ ಶಾಲೆ ಕೋಣೆ, ರಾಮಥಾಳದಲ್ಲಿ ಶೌಚಾಲಯ ನಿರ್ಮಾಣ, ಸಿಸಿ ರಸ್ತೆ, ಬೇವಿನಾಳದಲ್ಲಿ ಸಮುದಾಯ ಭವನ, ಇನಾಂಬೂದಿಹಾಳದಲ್ಲಿ ರಸ್ತೆ ಸುಧಾರಣೆ, ಹಿರೇಮಾಗಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ, ಅಂಗನವಾಡಿ ಕಟ್ಟಡ, ಸುರಳಿಕಲ್‌ನಲ್ಲಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಒಟ್ಟು ೪ ಕೋಟಿ ೫೩ ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಮಲ್ಲೇಶ ಎಸ್.ವಿಜಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.