13 ಜನ ಗುಣಮುಖ, 13 ಹೊಸ ಪ್ರಕರಣ ದೃಡ
ಬಾಗಲಕೋಟೆ
ಜಿಲ್ಲೆಯಲ್ಲಿ ಕೋವಿಡ್‍ನಿಂದ 13 ಜನ ಗುಣಮುಖರಾಗಿದ್ದು, ಹೊಸದಾಗಿ 13 ಕೊರೊನಾ ಪ್ರಕರಣಗಳು ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13944 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13727 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬೀಳಗಿ ಮತ್ತು ಹುನಗುಂದ ತಾಲೂಕಿನಲ್ಲಿ ತಲಾ 4, ಮುಧೋಳ 3 ಹಾಗೂ ಜಮಖಂಡಿಯಲ್ಲಿ ಇಬ್ಬರಲ್ಲಿ ಸೋಂಕು ದೃಡಪಟ್ಟಿವೆ.
ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 5748 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 461706 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 441450 ನೆಗಟಿವ್ ಪ್ರಕರಣ, ಹಾಗೂ 135 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 81 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.