This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ

ಉಮಾಶ್ರೀ ಮನೆಯಲ್ಲಿ ಕಳ್ಳತನ
ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ರಬಕವಿಯ ಹೆಸ್ಕಾಂ ಕಚೇರಿ ರಸ್ತೆಯಲ್ಲಿನ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಉಮಾಶ್ರೀ ಅವರ ಬಾಡಿಗೆ ಮನೆಯಲ್ಲಿ ಕಳ್ಳತನವಾಗಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಮನೆಯ ಬಾಗಿಲು ಮುರಿದ ಕರ್ಳಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ದೋಚಿದ್ದಾರೆ ಎನ್ನಲಾಗಿದೆ.
ಸದ್ಯ ಉಮಾಶ್ರೀ ಅವರು ಬೆಂಗಳೂರಲ್ಲಿ ವಾಸ ಮಾಡುತ್ತಿದ್ದು ರಬಕವಿಯ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಬೆಂಗಳೂರಿನಿAದ ಉಮಾಶ್ರೀ ಅವರು ಬಂದ ನಂತರ ಎಷ್ಟು ಕಳ್ಳತನ ನಡೆದಿದೆ ಎಂಬ ನಿಖರ ಮಾಹಿತಿ ದೊರೆಯಲಿದೆ.
ಈಗಾಗಲೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಕರುಣೇಶಗೌಡ ಮತ್ತು ಎಸ್‌ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

";