ನಿಮ್ಮ ಸುದ್ದಿ ಬೆಂಗಳೂರು
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಇದೆ.
ರಾಜ್ಯದಲ್ಲಿ ಮತ್ತಷ್ಟು ಬಿಜೆಪಿಯ ಬಲವರ್ಧನೆ ಹಿನ್ನೆಲೆಯಲ್ಲಿ ನಡ್ಡಾ ಭೇಟಿ ಕುತೂಹಲ ಮೂಡಿಸಿದೆ. ನಡ್ಡಾ ಅವರು ರಾಜ್ಯ ಭೇಟಿ ವೇಳೆ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಭಾಗಿಯಾಗಲಿದ್ದು, ಪಕ್ಷದ ಜಿಲ್ಲಾ ಮುಖಂಡರೊಂದಿಗೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ನಡ್ಡಾ ಅವರೊಂದಿಗಿನ ಚರ್ಚೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಗೂ ಸಚಿವರು ಭಾಗವಹಿಸಲಿದ್ದಾರೆ. ಪಕ್ಷದ ಮುಂದಿನ ನಡೆಗಳ ಬಗ್ಗೆ ಚರ್ಚೆ ನಡೆಸಿ ಕಾರ್ಯರೂಪಕ್ಕೆ ತರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.