ನಿಮ್ಮ ಸುದ್ದಿ ಬೆಂಗಳೂರು
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ ಅವರು ರಾಜ್ಯ ಸಂಘಕ್ಕೆ ಮನವಿ ಮಾಡಿದ್ದರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ 5 ಲಕ್ಷ ರೂ. ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪುಂಡಲೀಕ ಬಾಳೋಜಿ ತಿಳಿಸಿದ್ದಾರೆ.