This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಬಾಗಲಕೋಟೆಯಲ್ಲಿ 2 ಹಂತದ ಚುನಾವಣೆ

7 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ : ಡಿಸಿ ರಾಜೇಂದ್ರ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಡಿಸೆಂಬರ 22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆಗೆ ಡಿಸೆಂಬರ 7 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಜಿಲ್ಲಾಧಿಕಾರಿಗಳು ಡಿಸೆಂಬರ 22 ರಂದು ಮೊದಲ ಹಂತದಲ್ಲಿ ಜಮಖಂಡಿ, ಮುಧೋಳ, ಬೀಳಗಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ 89 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಡಿಸೆಂಬರ 11 ಆಗಿದೆ. ನಾಮಪತ್ರ ಪರಿಶೀಲನೆ ಡಿ.12 ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಡಿ.14 ಕೊನೆಯ ದಿನವಾಗಿದೆ. ಮತದಾನ ಡಿ.22 ರಂದು ಬೆಳಿಗ್ಗೆ 7 ರಿಂದ ಸಂಜೆ 5 ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ 27 ರಂದು ಎರಡನೇ ಹಂತದಲ್ಲಿ ಬಾಗಲಕೋಟೆ, ಹುನಗುಂದ, ಬಾದಾಮಿ, ಇಲಕಲ್ಲ ಹಾಗೂ ಗುಳೇದಗುಡ್ಡ ಸೇರಿ ಒಟ್ಟು 104 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಡಿ.16 ಆಗಿದ್ದು, ನಾಮಪತ್ರ ಪರಿಶೀಲನೆ ಡಿ.17 ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಡಿ.19 ಕೊನೆಯ ದಿನವಾಗಿದೆ. ಮತದಾನ ಡಿ.27 ರಂದು ಬೆಳಿಗ್ಗೆ 7 ರಿಂದ ಸಂಜೆ 5 ವರೆಗೆ ನಡೆಯಲಿದೆ. ಎರಡು ಹಂತಗಳ ಮತದಾನ ಎಣಿಕೆ ಪ್ರಕ್ರಿಯೆ ಡಿಸೆಂಬರ 30 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.

ಮೊದಲನೆ ಹಂತದ ಚುನಾವಣೆಗೆ 265 ಮತಗಟ್ಟೆಗಳಿದ್ದು, ಒಟ್ಟು 480161 ಜನ ಮತ ಚಲಾಯಿಸಲಿದ್ದಾರೆ. ಅದರಲ್ಲಿ 46388 ಪುರುಷ, 24082 ಮಹಿಳಾ ಹಾಗೂ 18 ಜನ ಇತರೆ ಮತದಾರರಿದ್ದಾರೆ. ಎರಡನೇ ಹಂತದ ಚುನಾವಣೆಗೆ 712 ಮತಗಟ್ಟೆಗಳಿದ್ದು, ಒಟ್ಟು 487008 ಜನ ಮತದಾರರ ಪೈಕಿ 244808 ಪುರುಷ, 242175 ಮಹಿಳಾ ಮತ್ತು 25 ಇತರೆ ಮತದಾರರಿದ್ದಾರೆಂದು ತಿಳಿಸಿದ್ದಾರೆ.

ನೀತಿ ಸಂಹಿತೆ

ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಘೋಷಿಸಿದ್ದು, ಸದಾಚಾರ ನೀತಿ ಸಂಹಿತೆ ನವೆಂಬರ 30 ರಿಂದ ಡಿಸೆಂಬರ 31ರ ಸಂಜೆ 5 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾಮಾನ್ಯ ಸಭೆ ನಡೆಸಲು ಅಡ್ಡಿಯಿರುವದಿಲ್ಲ. ಆದರೆ ಹೊಸ ಯೋಜನೆ ಅನುಷ್ಠಾನಗಳ ಬಗ್ಗೆ ತಿರ್ಮಾನ ತೆಗೆದುಕೊಳ್ಳತಕ್ಕದ್ದಲ್ಲ. ಬರಪೀಡಿತ ಪ್ರದೇಶಗಳ ಕುಡಿಯುವ ನೀರಿನ ಅಥವಾ ಈ ಯೋಜನೆಯಡಿ ಇತರ ಕಾಮಗಾರಿಗಳನ್ನು ತೆಗೆದುಕೊಂಡು ಅನುಷ್ಠಾನಗೊಳಿಸಬಹುದು. ಯೋಜನೆ ಅನುಷ್ಠಾನದಲ್ಲಿ ಸಾರ್ವಜನಿಕ ಸಮಾರಂಭ, ರಾಜಕೀಯ ನಾಯಕರುಗಳ ಉಪಸ್ಥತಿಯಲ್ಲಿ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.
ನೆರೆ ಪೀಡಿತ ಹಾಗೂ ಪ್ರಕೃತಿ ವಿಕೋಪ ಪೀಡಿತ ಜನ ಸಮುದಾಯಕ್ಕೆ ನೀಡಲಾಗುವ ಯಾವುದೇ ಪರಿಹಾರ, ಸೌಲಭ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಿರುವದಿಲ್ಲ. ಚುನಾವಣೆ ಪಕ್ಷರಹಿತವಾಗಿ ನಡೆಯುವದರಿಂದ ರಾಜಕೀಯ ಪಕ್ಷಗಳ ಚಿಹ್ನೆಗಳು ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಉಪಯೋಗಿಸಿ ಪ್ರಚಾರ ಮಾಡುವಂತಿಲ್ಲ. ಸಾಂಸ್ಕøತಿಕ ಹಾಗೂ ಧಾರ್ಮಿಕ ಸಭೆ ಸಮಾರಂಭ ನಡೆಸಲು ಅವಕಾಶವಿದ್ದು, ಆದರೆ ರಾಜಕೀಯ ವ್ಯಕ್ತಿಗಳು ಭಾಗವಹಿಸುವಂತಿಲ್ಲ. ವಿಧನಮಂಡಳ ಮತ್ತು ಸಂಸತ್ ಸದಸ್ಯರುಗಳಿಗೆ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಸಾಮಾನ್ಯ ಕರ್ತವ್ಯ ನಿರ್ವಹಣೆಗೆ ಒದಗಿಸಲಾಗಿರುವ ವಾಹನವನ್ನು ಚುನಾಯಿತಿ ಸಭೆ ನಡೆಸಲು ಬಳಸುವಂತಿಲ್ಲ.
ಮತದಾರರ ಮೇಲೆ ಪ್ರಭಾವ ಭೀರುವಂತಹ ಯಾವುದೇ ಸರ್ಕಾರಿ ಕಾರ್ಯಕ್ರಮ ಅಥವಾ ಯೋಜನೆ ನಡೆಯದಂತೆ ನೋಡಿಕೊಳ್ಳತಕ್ಕದ್ದು. ಜಿಲ್ಲಾ, ತಾಲೂಕಾ ಮಟ್ಟದಲ್ಲಿ ಪಡಿತರ ಚೀಟಿ ವಿತರಣೆ, ಗ್ರಾಮೀಣ ಭಾಗದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನ ವಿಷಯಗಳಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ತಿರ್ಮಾನ ತೆಗೆದುಕೊಳ್ಳುವಂತಿಲ್ಲ. ಯಾವುದೇ ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡಲು ಅವಕಾಶವಿರುವದಿಲ್ಲ. ಜನ ಸ್ಪಂದನ ಸಭೆ ನಡೆಸುವಂತಿಲ್ಲ. ಸಚಿವರ, ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಮತ್ತು ಇತರೆ ಸಭೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ಗ್ರಾಪಂ ಚುನಾವಣಾ ಪೂರ್ವದಲ್ಲಿ ಪ್ರಾರಂಭಿಸಿರುವ, ಜಾರಿಯಲ್ಲಿರುವ ಕಾಮಗಾರಿಗಳ ಸಂಬಂಧ ಪಂಚಾಯತಿಯು ಹಣ ಪಾವತಿ ಮಾಡಬಹುದು. ಜಿ.ಪಂ, ತಾ.ಪಂ ಅಧ್ಯಕ್ಷರು, ಉಪಾದ್ಯಕ್ಷರುಗಳಿಗೆ ಹಾಗೂ ಎಪಿಎಂಸಿ ಅಧ್ಯಕ್ಷರಿಗೆ ಒದಗಿಸಲಾಗಿರುವ ಸರಕಾರಿ ವಾಹನಗಳನ್ನು ಚುನಾವಣೆ ಮುಕ್ತಾಯದವರೆಗೆ ಜಿಲ್ಲಾಧಿಕಾರಿಗಳ ವಶದಲ್ಲಿರಿಸಬೇಕು. ಗ್ರಾಮೀಣ ಭಾಗದಲ್ಲಿ ಮಂತ್ರಿಗಳು, ಶಾಸಕರು ಕಾರ್ಯಕ್ರಮ ಆಯೋಜಿಸಿ ಮತದಾರರನ್ನು ಪ್ರಭಾವಿಸುವ ಸಭೆ ನಡೆಸುವಂತಿಲ್ಲ. ಚುನಾವಣೆ ನಡೆಯುವ ಗ್ರಾ.ಪಂ ವ್ಯಾಪ್ತಿಯ ಅನಧಿಕೃತ ಪೋಸ್ಟರಗಳು, ಬ್ಯಾನರ್‍ಗಳು ಇರದಂತೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳು ಕ್ರಮವಹಿಸಬೇಕು. ಅಲ್ಲದೇ ಸರಕಾರಿ ವಾಹನ ದುರುಪಯೋಗವಾಗದಂತೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾ, ತಾಲೂಕ ಮಟ್ಟದ ಅಧಿಕಾರಿಗಳು ಸರಕಾರಿ, ಅರೆ ಸರಕಾರಿ ಕಚೇರಿ ಬೊರ್ಡಗಳು, ಎಪಿಎಂಸಿ ಮುಂತಾದ ಕಚೇರಿ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

";