ನಿಮ್ಮ ಸುದ್ದಿ ಬಾಗಲಕೋಟೆ
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿAದ ೨೦೧೯-೨೦ನೇ ಸಾಲಿನ ಸಂಯಮ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಇದೇ ಡಿಸೆಂಬರ ೧೯ ರಂದು ನಗರದ ಬಿವಿವ ಸಂಘದ ನೂತನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಹಣಮಂತ ಕೊಟಬಾಗಿ ತಿಳಿಸಿದರು.
ನವನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಮಾಜದ ಮೇಲೆ ಕಳಕಳಿ ಹೊಂದಿದ ಮನೆ ಮನೆಗೆ ತೆರಳಿ ದುಶ್ಚಟಗಳನ್ನು ಜೋಳಿಗೆ ಹಾಕಿಸಿಕೊಳ್ಳುತ್ತಾ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಜಿಲ್ಲೆಯ ಇಳಕಲ್ಲಿನ ಶ್ರೀ ವಿಜಯ ಮಹಾಂತೇಶ ಮಹಾಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ರಾಜ್ಯ ಸಂಯಮ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಳೆದ ೨೦೧೨, ಜುಲೈ ೨ ರಂದು ಇಲಕಲ್ಲ ಚಿತ್ತರಗಿ ಸಂಸ್ಥಾನ ಮಠದ ಹಿಂದಿನ ಶ್ರೀಗಳಾದ ವಿಜಯಮಹಾಂತೇಶ ಶ್ರೀಗಳಿಗೆ ಪ್ರಧಾನ ಮಾಡಲಾಗಿತ್ತು. ಅವರ ಹಾಕಿಕೊಟ್ಟದ ಮಾರ್ಗದಲ್ಲಿಯೇ ಇವರು ಕೂಡಾ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜೋಳಿಗೆ ಹಾಕಿದ್ದರಿಂದ ೨೦೧೯-೨೦ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಸಂಯಮ ಪ್ರಶಸ್ತಿಯು ೧ ಲಕ್ಷ ರೂ.ಗಳ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಸಂಯಮ ಪ್ರಶಸ್ತಿಗೆ ಭಾಜನರಾದ ಗುರುಮಹಾಂತ ಶ್ರೀಗಳ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ತೋರಿದ ಕಳಕಳಿಯನ್ನು ಕಂಡು ಶುಭ ಹಾರೈಸುವ ಮೂಲಕ ಅಭಿನಂಧನಾ ಪತ್ರವನ್ನು ಸಹ ನೀಡಿದ್ದಾರೆ ಎಂದು ತಿಳಿಸಿದರು.
ಡಿಸೆಂಬರ ೧೯ ರಂದು ಮಧ್ಯಾಹ್ನ ೩ ಗಂಟೆಗೆ ಜರಗುವ ಪ್ರಶಸ್ತಿ ಪ್ರಧಾನ ಸಮಾರಂಭದ ದಿವ್ಯ ಸಾನಿಧ್ಯವನ್ನು ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆ ಹಾಗು ಪ್ರಶಸ್ತಿ ಪ್ರಧಾನವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸುವರು.
ಅಧ್ಯಕ್ಷತೆಯನ್ನು ಶಾಸಕ ವೀರಣ್ಣ ಚರಂತಿಮಠ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎಸ್.ಶಂಕರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಉಪಸ್ಥಿತರಿದ್ದರು.