ನಿಮ್ಮ ಸುದ್ದಿ ಬೆಂಗಳೂರು
ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಸೋಮವಾರ ಬೆಂಗಳೂರಲ್ಲಿ ಇಡೀ ದಿನ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ಅಲ್ಲಲ್ಲಿ ಒಂದಿಷ್ಟು ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಹೀಗಾಗಿ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಜನವರಿ 7ರ ವರೆಗೆ ಶೀತಗಾಳಿ, ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.