ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿವೆ.
ಶನಿವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಒಬ್ಬೊಬ್ಬರೇ ಅಬ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಎಸ್.ಸಿ ಮಹಿಳಾ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ.1ರ ಗ್ಯಾನವ್ವ ದುರಗಪ್ಪ ಮಾದರ ಹಾಗೂ ಸಾಮಾನ್ಯ ಮಹಿಳಾ ಮೀಸಲು ಇದ್ದ ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ 5ರ ಜ್ಯೋತಿ ಜಗದೀಶ ಪೂಜಾರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಬೆಳನ್ನವರ ಮಧ್ಯಾಹ್ನ 1ಕ್ಕೆ ನಡೆದ ಸಭೆಯಲ್ಲಿ ಎರಡೂ ಸ್ಥಾನಕ್ಕೆ ಅವಿರೋಧ ಆಯ್ಕೆ ಘೋಷಿಸಿದರು. ಪಿಡಿಒ ಎಂ.ಎ.ದಖನಿ, ನೂತನ ಸದಸ್ಯರು, ಸಿಬ್ಬಂದಿ ಇದ್ದರು.