ನಿಮ್ಮ ಸುದ್ದಿ ಬಾಗಲಕೋಟೆ
ಹುನಗುಂದ ತಾಲೂಕಿನ ಸೂಳೇಬಾವಿ ಸರಕಾರಿ ಪಪೂ ಕಾಲೇಜ್ ಆವರಣದಲ್ಲಿನ ಕೊಠಡಿಗಳ ಉದ್ಘಾಟನೆ ಸಮಾರಂಭ ಫೆ.೧೦ರಂದು ಬೆಳಗ್ಗೆ ೧೧.೩೦ಕ್ಕೆ ನಡೆಯಲಿದೆ ಎಂದು ಪ್ರಾಚಾರ್ಯ ಬಿ.ಡಿ.ದೋಟಿಹಾಳ ತಿಳಿಸಿದ್ದಾರೆ.
ಶಾಸಕ ದೊಡ್ಡನಗೌಡ ಪಾಟೀಲ ನೂತನ ಕಟ್ಟಡ ಉದ್ಘಾಟಿಸುವರು. ಡಿಸಿಎಂ ಗೋವಿಂದ ಕಾರಜೋಳ ಉಪಸ್ಥಿತರಿರುವರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮುರಗೇಶ ನಿರಾಣಿ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ಆನಂದ ನ್ಯಾಮಗೌಡ, ವಿಪ ಸದಸ್ಯ ಆರ್.ಬಿ.ತಿಮ್ಮಾಪೂರ, ಅರುಣ ಶಹಾಪೂರ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಜಿಪಂ ಸದಸ್ಯ ಶಶಿಕಾಂತಗೌಡ ಪಾಟೀಲ, ತಾಪಂ ಅಧ್ಯಕ್ಷ ಅನ್ನದಾನೇಶ್ವರ ನಾಡಗೌಡ, ಉಪಾಧ್ಯಕ್ಷೆ ಉಮಾದೇವಿ ಗೌಡರ, ತಾಪಂ ಸದಸ್ಯೆ ಯಶೋಧ ಭದ್ರಣ್ಣವರ, ಗ್ರಾಪಂ ಅಧ್ಯಕ್ಷೆ ಗ್ಯಾನವ್ವ ಮಾದರ, ಉಪಾಧ್ಯಕ್ಷೆ ಜ್ಯೋತಿ ಪೂಜಾರಿ, ಮಲ್ಲಪ್ಪ ನೆಮದಿ, ಬನದೇವಿ ಕಲಬುರ್ಗಿ, ಹನಮಂತ ಮಿಣಜಗಿ, ಸಂಕಮ್ಮ ಹಾದಿಮನಿ, ಮಾಬುಬಿ ಮುಲ್ಲಾ, ಪ್ರಶಾಂತ ಗಿಡದಾನಪ್ಪಗೋಳ, ಎಸ್.ಟಿ.ಪಾಟೀಲ, ಕಾಲೇಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗೇಶ ಗಂಜಿಹಾಳ ಇತರರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.