This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಮೆಡಿಕಲ್ ಕಾಲೇಜ್ ಆರಂಭಕ್ಕೆ ಜನಾಂದೋಲನ

ಅನುದಾನ ಬಿಡುಗಡೆಗೆ ಅಕ್ಟೋಬರ್ ೧ರವರೆಗೆ ಕರವೇ ಗಡುವು

ನಿಮ್ಮ ಸುದ್ದಿ ಬಾಗಲಕೋಟೆ

೨೦೧೪-೧೫ ರಲ್ಲಿ ಬಾಗಲಕೋಟೆಗೆ ಘೋಷಣೆಯಾಗಿರುವ ಸರಕಾರಿ ವೈದ್ಯಕೀಯ ಕಾಲೇಜಿಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಲು ಅಕ್ಟೋಬರ ೧ರವರೆಗೆ ಗಡುವು ಎಂದು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ನಗರದ ಬಸವೇಶ್ವರ ವೃತ್ತದಲ್ಲಿ ಜರುಗಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಬೃಹತ್ ಜನಾಂದೋಲನ ಕಾರ್ಯಕ್ರಮದಲದಲಿ ಮಾತನಾಡಿ, ಜಿಲ್ಲೆಯ ಸಚಿವರು ಮತ್ತು ಶಾಸಕರು ತಮ್ಮ ಬೇಜವಾಬ್ದಾರಿಯನ್ನು ಮರೆತು ಕಾಲೇಜು ಆರಂಭಕ್ಕೆ ಸರಕಾರದ ಮೇಲೆ ಒತ್ತಡ ಹೇರಬೇಕು. ಬಾಗಲಕೋಟೆಯ ಶಾಸಕರು ಕೊಳಕು ರಾಜಕಾರಣ ಮಾಡುವವರು ಇಂತಹ ಹೋರಾಟವನ್ನು ಮಾಡುತ್ತಿದ್ದಾರೆ ಎಂದು ನೀಡಿದ ಹೇಳಿಕೆಯನ್ನು ಕಟುವಾಗಿ ಖಂಡಿಸಿದರು.

ನಿಮ್ಮ ಸರ್ವಾಧಿಕಾರಿ ಧೋರಣೆಯಿಂದ ಹೋರಾಟವನ್ನು ಹತ್ತಿಕ್ಕಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿ ಕರೋನಾ ನೆಪವೊಡ್ಡಿ, ಸಾಕಷ್ಟು ಪ್ರಯತ್ನಗಳು ನಡೆದವು. ನಾವು ಮಾಡುತ್ತಿರುವ ಹೋರಾಟ ಜಿಲ್ಲೆಯ ಬಡವರ, ರೈತರ, ಕೃಷಿ ಕಾರ್ಮಿಕರ ಮತ್ತು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಹೋರಾಟ ಮಾಡುತ್ತಿದ್ದೇವೆ ಎಂದರು.

ಏಪ್ರಿಲ್ ೦೬ ಇಂದು ಸರಕಾರಿ ವೈಧ್ಯಕೀಯ ಮಹಾವಿದ್ಯಾಲಯದ ಅಡಿಗಲ್ಲು ಸಮಾರಂಭ ಇಂದು ನಡೆದ ಜನಾಂದೋಲನ ಕಾರ್ಯಕ್ರಮ ಅಂತ್ಯವಲ್ಲ ಇದು ಆರಂಭ. ಜಿಲ್ಲೆಗೆ ಮಂಜೂರಾಗಿರುವ ಕಾಲೇಜು ಆರಂಭವಾಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಮೊಂಡುತನವನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಬೇಕು. ಇಲ್ಲದಿದ್ದರೆ ಮುಂಬರುವ ದಿನಮಾನದಲ್ಲಿ ಜನತೆಯೇ ನಿಮಗೆ ತಕ್ಕಪಾಠ ಕಲಿಸುತ್ತಾರೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಅಕ್ಟೋಬರ್ ೧ರೊಳಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಾಲೇಜು ಆರಂಭಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಸೋಂಪೂರ ಮಾತನಾಡಿ ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚೆನ್ನಮ್ಮ, ಅಣ್ಣ ಬಸವಣ್ಣನವರ ನಡೆದಾಡಿದ ನಾಡಿನಲ್ಲಿ ಒಂದೇ ಒಂದು ಮೆಡಿಕಲ್ ಕಾಲೇಜನ್ನು ಆರಂಭಕ್ಕೆ ಇಂತಹ ಹೋರಾಟ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ, ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಇಬ್ಬರು ವಿರೋಧ ಪಕ್ಷದ ನಾಯಕರಿದ್ದಾರೆ. ಅವರು ಅಧಿವೇಶನದಲ್ಲಿ ಮಾತನಾಡಿ ಮಂಜೂರಾದ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿಸಿ ತಮ್ಮ ಮಾನವೀಯತೆ ಮೆರೆಯಬೇಕು ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ ನಾಗರಾಜ ಹೊಂಗಲ್ ಮಾತನಾಡಿ, ಸರ್ಕಾರಿ ವೈಧ್ಯಕೀಯ ಕಾಲೇಜು ವiಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕನಸಿನ ಕೂಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಜೂರು ಮಾಡಿ ೨೦೧೪-೧೫ರಲ್ಲಿಯೇ ಘೋಷಣೆ ಮಾಡಿ ೧೮ ರವರೆಗೆ ಅಧಿಕಾರದಲ್ಲಿದ್ದಾಗೆ ಕಾಲೇಜಿಗೆ ಬೇಕಾದ ಅಗತ್ಯ ಅನುದಾನ ಬಿಡುಗಡೆ ಮಾಡದೇ ಕನಸಿನ ಕೂಸನ್ನು ಪಾಪದ ಕೂಸನ್ನಾಗಿ ಮಾಡಿ ಹೋಗಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜನತೆ ಸಿದ್ಧರಾಮಯ್ಯನವರಿಗೆ ರಾಜಕೀಯ ಪುರ್ನಜನ್ಮ ನೀಡಿದ್ದಾರೆ. ಅವರ ಋಣವನ್ನು ತೀರಿಸುವ ಅವಕಾಶ ಬಂದಿದೆ. ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನವನ್ನು ಬಿಡುಗಡೆಗೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರೆ ನಿಮ್ಮನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಮಿತ್‌ಶಾ ಅವರು ಉಪಮುಖ್ಯಮಂತ್ರಿಗಳನ್ನಾಗಿ ಮಾಡಿಲ್ಲ. ಮುಧೋಳ ಮತಕ್ಷೇತ್ರದ ಜನತೆ ನಿಮ್ಮನ್ನು ಆಯ್ಕೆ ಮಾಡಿದಾಗ ಉಪಮುಖ್ಯಮಂತ್ರಿಗಳಾಗಿದ್ದೀರಿ. ಕಾಲೇಜು ಆರಂಭಕ್ಕೆ ಅನುದಾನ ಬಿಡುಗಡೆ ಮಾಡಿಸಲು ನಿಮಗೇನು ತೊಂದರೆ ಎಂದು ಪ್ರಶ್ನಿಸಿದ ಅವರು, ತಕ್ಷಣ ಜಿಲ್ಲೆಗೆ ಮಂಜೂರಾದ ಕಾಲೇಜಿಗೆ ಅಗತ್ಯ ಅನುದಾನ ನೀಡಿ ಇಲ್ಲದಿದ್ದರೆ ನಾವು ಜೈಲಿಗೂ ಹೋಗಲು ಸಿದ್ಧ ಎಂದು ಹೇಳಿದರು.
ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ ಮಾತನಾಡಿ, ಅನುದಾನ ಮಂಜೂರಿ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳ ನಿರ್ಲಕ್ಷವೇ ಕಾರಣ. ರಾಜಕಾರಣಿಗಳೇ ಜಿಲ್ಲೆಗೆ ಮಂಜೂರಾಗಿರುವ ಕಾಲೇಜಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಬಾಗಲಕೋಟೆಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಕಾಲೇಜನ್ನು ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು.

ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಆರ್.ಡಿ.ಬಾಬು, ಆತ್ಮಾರಾಮ ನೀಲನಾಯಕ, ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಯುವರಾಜ ಬಂಡಿ ಮಾತನಾಡಿ ಜಿಲ್ಲೆಗೆ ಮಂಜೂರಾಗಿರುವ ಕಾಲೇಜಿಗೆ ನೀಡುವ ಅನುದಾನ ಭಿಕ್ಷೆಯಲ್ಲ ಅದು ನಮ್ಮ ಹಕ್ಕು, ಅನುದಾನ ನೀಡಿದಿದ್ದರೆ ಜಿಲ್ಲೆಯ ಸಂಸದರು ಹಾಗೂ ಶಾಸಕರ ಮನೆಯ ಮುಂದೆ ಸತ್ಯಾಗ್ರಹ ಮಾಡಲಾಗುವುದು ಎಂದು ಹೇಳಿದರು.

ಜನಾಂದೋಲ ಕಾರ್ಯಕ್ರಮದಲ್ಲಿ ಯುವ ಮುಖಂಡ ಸಂತೋಷ ಹೊಕ್ರಾಣಿ, ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ರಾಜು ಎಸ್.ಮನ್ನಿಕೇರಿ, ನಗರಸಭಾ ಸದಸ್ಯ ಚೆನ್ನವೀರ ಅಂಗಡಿ, ಹಾಜಿಸಾಬ ದಂಡಿನ, ಮುಖಂಡರಾದ ಗೋವಿಂದ ಬಳ್ಳಾರಿ, ಮಂಜುನಾಥ ಮುಚಖಂಡಿ, ಮಂಜುನಾಥ ಪುರತಗೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಅಮರೇಶ ಕೊಳ್ಳಿ, ಮಹಿಳಾ ಮುಖಂಡರಾದ ಭಾಗ್ಯಶ್ರೀ ಬೆಟಗೇರಿ, ಸವಿತಾ ಹಿರೇಮಠ, ಸಹನಾ ಅಂಗಡಿ, ಜಯಶ್ರೀ ಸಾಲಿಮಠ, ಕರವೇ ಪದಾಧಿಕಾರಿಗಳಾದ ಬಸವರಾಜ ಧರ್ಮಂತಿ, ಬಸವರಾಜ ಅಂಬಿಗೇರ, ವಿನೂತ ಮೇಲಿನಮನಿ, ಮಲ್ಲು ಕಟ್ಟಿಮನಿ, ರಮಜಾನ ನಧಾಫ, ಅಕ್ಷಯ ಚವ್ಹಾಣ, ರವಿ ಶಿಂಧೆ,ದೇವೆಂದ್ರ ಅಸ್ಕಿ, ಡಿ.ಡಿ.ನದಾಫ, ಪ್ರವೀಣ ಪಾಟೀಲ, ಮಂಜು ಪವಾರ, ಆಕಾಶ ಆಸಂಗಿ, ಮಂಜು ರಾಮದುರ್ಗ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಕರವೇ ಪದಾಧಿಕಾರಿಗಳು, ಮಹಿಳೆಯರು, ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಬವಿವಿಸಂಘದ ಆವರಣದಲ್ಲಿರುವ ಶ್ರೀ ಗುರುಬಸವ ಬೀಳೂರ ಅಜ್ಜನವರ ಗದ್ದುಗೆಗೆ ಮಾಲಾರ್ಪಣೇ ಮಾಡುವ ಮೂಲಕ ಅಲ್ಲಿಂದ ಪಾದಯಾತ್ರೆ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದಲ್ಲಿ ಜನಾಂದೋಲನ ಸಭೆಯಾಗಿ ಮಾರ್ಪಟ್ಟು ೨೦೧೪-೧೫ ರಲ್ಲಿ ರಾಜ್ಯ ಸರ್ಕಾರ ಬಾಗಲಕೋಟೆಗೆ ಘೋಷಣೆ ಮಾಡಿರುವ ಸರಕಾರಿ ವೈಧ್ಯಕೀಯ (ಮೆಡಿಕಲ್) ಕಾಲೇಜು ಕಾರ್ಯಾರಂಭಕ್ಕೆ ತಕ್ಷಣವೇ ಅನುದಾನ ಒದಗಿಸಬೇಕು. ಮುಳುಗಡೆಯಿಂದ ಬಾಧಿತವಾದ ಜಿಲ್ಲೆಗೆ ಹೈದರಾಬಾದ್ (ಕಲ್ಯಾಣ) ಕರ್ನಾಟಕ ಭಾಗಕ್ಕೆ ನೀಡಿದಂತೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ನಡುಗಡ್ಡೆಯಾದ ಕಿಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶದ ಜನತೆಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು ಎಂದು ವಿವಿಧ ಬೇಡಿಕೆಯುಳ್ಳ ಮನವಿ ಪತ್ರವನ್ನು ತಹಸೀಲ್ದಾರ ಗುರುಸಿದ್ದಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.

";