*5 ಜನ ಗುಣಮುಖ, 13 ಹೊಸ ಪ್ರಕರಣ ದೃಡ*
ನಿಮ್ಮ ಸುದ್ದಿ ಬಾಗಲಕೋಟೆ
5 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 13 ಕೊರೊನಾ ಪ್ರಕರಣಗಳು ಬುಧವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14025 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13760 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ 4, ಜಮಖಂಡಿ 3, ಬೀಳಗಿ, ಮುಧೋಳ, ಹುನಗುಂದ ತಲಾ 2 ಹಾಗೂ ಬೇರೆ ಜಿಲ್ಲೆಯ ಇಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ಸರಕಾರಿ, ಖಾಸಗಿ ಹಾಗೂ ಹೋಮ್ ಐಸೋಲೇಷನ್ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರಿಕ್ಷಿಸಲಾಗುತ್ತಿದ್ದ 4215 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 476947 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 458143 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 129 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.