This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಕೊರೋನಾ ನಿಯಮ ಉಲ್ಲಂಘನೆ:೨ ಪ್ರಕರಣ ದಾಖಲು

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ನಿಮ್ಮ ಸುದ್ದಿ ಬಾಗಲಕೋಟೆ

ಕೋವಿಡ್ ೨ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ನಿಯಮ ಉಲ್ಲಂಘಿಸಿ ರ‍್ಯಾಲಿ ನಡೆಸಿದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಪ್ರೀಲ್ ೨ ರಂದು ಸರಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಜಾತ್ರೆ, ರ‍್ಯಾಲಿ, ಪ್ರತಿಭಟನೆ ಹಮ್ಮಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶ ಪಾಲನೆ ಮಾಡದೇ ರ‍್ಯಾಲಿ ಕೈಗೊಂಡವರ ವಿರದ್ದ ಈಗಾಗಲೇ ೨ ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ನಿಯಮ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿರುವುದಾಗಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಮಾಸ್ಕ, ದೈಹಿಕ ಅಂತರ ಪಾಲನೆ ಕಡ್ಡಾಯವಾಗಿದ್ದು, ಮಾಸ್ಕ ಧರಿಸದಿದ್ದಲ್ಲಿ ನಗರ ಪ್ರದೇಶದಲ್ಲಿ ೨೫೦ ರೂ., ಗ್ರಾಮೀಣ ಪ್ರದೇಶದಲ್ಲಿ ೧೦೦ ರೂ.ಗಳ ದಂಡ ವಿಧಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ೬೩೬೨೧ ಜನರಿಗೆ ದಂಡ ವಿಧಿಸಿ ೫೬,೮೫,೦೩೯ ರೂ.ಗಳನ್ನು ಸಂಗ್ರಹಿಸಲಾಗಿದೆ. ಎಪ್ರೀಲ್ ೧ ರಿಂದ ೮ವರಗೆ ೩೫೮೫ ಜನರಿಗೆ ದಂಡ ವಿಧಿಸಿ, ೩,೫೮,೫೦೦ ರೂ.ಗಳನ್ನು ಸಂಗ್ರಹಿಸಲಾಗಿದೆ.

ಕೋವಿಡ್ ಮಾದರಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಪ್ರತಿದಿನ ೩೬೦೦ ಗುರಿ ನಿಗದಿಪಡಿಸಲಾಗಿದೆ. ಶೇ.೮೫ ರಷ್ಟು ಪ್ರತಿದಿನ ಗುರಿ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.

ಶ್ರೀಶೈಲಕ್ಕೆ ಹೋಗಿ ಬಂದವರೆಲ್ಲರ ಸ್ಯಾಂಪಲ್ ಕಲೆಕ್ಟ ಮಾಡಲಾಗುತ್ತಿದೆ. ಜಿಲ್ಲೆಯಿಂದ ಕೋವಿಡ್ ಮಾದರಿ ನೀಡಿ ಶ್ರೀಶೈಲಕ್ಕೆ ಹೋದವರಲ್ಲಿ ೭ ಜನರಿಗೆ ಕೋವಿಡ್ ದೃಡಪಟ್ಟಿದೆ. ಶ್ರೀಶೈಲಕ್ಕೆ ಭಕ್ತರು ಬರುವದನ್ನು ನಿರ್ಭಂದಿಸುವ ಕುರಿತು ಮನವಿ ಮಾಡಿಕೊಳ್ಳಲಾಗುತ್ತಿದೆ.

ಹೊರ ರಾಜ್ಯಕ್ಕೆ ಹೋಗಿ ಬಂದವರ ಕೋವಿಡ್ ಮಾದರಿ ಪರೀಕ್ಷಿಸಲಾಗುತ್ತಿದೆ. ಎಪ್ರೀಲ್ ೧ ರಿಂದ ಇಲ್ಲಿಯವರೆಗೆ ೬೦ ಜನರಿಗೆ ಕೋವಿಡ್ ದೃಡಪಟ್ಟಿರುವದನ್ನು ಕಂಡು ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಲಸಿಕೆಯನ್ನು ಪ್ರತಿದಿನ ೧೦ ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನ್‌ಗಳ ಕೊರತೆ ಇರುವದಿಲ್ಲ. ಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಹೊಂದಿದ ಹಾಸಿಗೆಗಳನ್ನು ಸಿದ್ದಪಡಿಸಲಾಗಿದೆ. ಒಟ್ಟು ೩೫೦ ಹಾಸಿಗೆಗಳು ಇದ್ದು ಅದರಲ್ಲಿ ೭೫ ಕೋವಿಡ್ ರೋಗಿಗಳಿಗೆ ಮೀಸಲಿರಿಸಲಾಗಿದೆ. ಪ್ರಕರಣಗಳು ಹೆಚ್ಚಾದಲ್ಲಿ ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು. ಅಗತ್ಯ ಬಿದ್ದಲ್ಲಿ ಸಿಸಿಸಿ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಮಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಡಿ.ಪಟ್ಟಣಶೆಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";