27 ಜನ ಗುಣಮುಖ, 55 ಹೊಸ, 1 ಮೃತ ಪ್ರಕರಣ ದೃಡ
ನಿಮ್ಮ ಸುದ್ದಿ ಬಾಗಲಕೋಟೆ
ಕೋವಿಡ್‍ನಿಂದ 27 ಜನ ಗುಣಮುಖರಾಗಿದ್ದು, ಹೊಸದಾಗಿ 55 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಸೋಮವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14228 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13868 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಹೊಸದಾಗಿ ಬಾಗಲಕೋಟೆ 26, ಮುಧೋಳ 12, ಜಮಖಂಡಿ 5, ಬೀಳಗಿ 3, ಬಾದಾಮಿ, ಹುನಗುಂದ ತಲಾ 2 ಹಾಗೂ ಬೇರೆ ಜಿಲ್ಲೆಯ 5 ಜನರಲ್ಲಿ ಸೋಂಕು ದೃಡಪಟ್ಟಿವೆ.
ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1661 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 490800 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 474347 ನೆಗಟಿವ್ ಪ್ರಕರಣ, ಹಾಗೂ 138 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 222 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
*ಬಾಗಲಕೋಟೆ ನವನಗರ ನಿವಾಸಿ 51 ವರ್ಷದ ಮಹಿಳೆ (ಪಿ-1056082) ತೀರ್ವ ಉಸಿರಾಟದ ತೊಂದರೆಯಿಂದ (ಸಾರಿ ಕೇಸ್) ಬಾಗಲಕೋಟೆ ಕೆರೂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರನ್ನು ಕೋವಿಡ್ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
.