This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಸಾರಿಗೆ ಸಂಕಷ್ಟಕ್ಕೆ ಬಿಜೆಪಿಯೇ ಹೊಣೆ

ನಿಮ್ಮ ಸುದ್ದಿ ಬಾಗಲಕೋಟೆ

ಕೊರೊನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.

ಜಿಲ್ಲೆಯ ಲೋಕಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು, ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಿತ್ತು, ಆದರೆ, ರಾಜ್ಯ ಸರಕಾರವು ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದ ಅವರು ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣವು ಸ್ವಯಂಕೃತ ಅಪರಾಧವಾಗಿದೆ ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರು.

ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು, ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಸಲಹೆ ನೀಡಿದರು.

ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಿಗಳಿಂದಾಗಿ ಹಾದಿ ತಪ್ಪಿರುವ ರಾಜ್ಯ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸುವಂತಾಗಿದೆ, ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ಉತ್ತರ ನೀಡಲಿದ್ದಾರೆ ಎಂದರು.

ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಕಾಶಿನಾಥ ಹುಡೇದ,  ಅರುಳು ಮರುಳಿನಲ್ಲಿರುವ ಯಡಿಯೂರಪ್ಪ ತಮ್ಮ ಕುಟುಂಬದ ರಬ್ಬರ ಸ್ಟಾಂಪ್ ಆಗಿದ್ದಾರೆ, ಸಹಿ ಹಾಕಲಿಕ್ಕಷ್ಟೇ ಸೀಮಿತವಾಗಿದ್ದಾರೆ, ಡಮ್ಮಿ ಮುಖ್ಯಮಂತ್ರಿಯಾಗಿದ್ದು, ದೃತರಾಷ್ಟ ಪ್ರೇಮದಿಂದ ತಮ್ಮ ಅಧಿಕಾರವನ್ನು ವಿಜಯೇಂದ್ರಗೆ ನೀಡಿದ್ದಾರೆ ಎಂದ ಅವರು ಈ ಸರ್ಕಾರದಲ್ಲಿ ಯಾವೊಬ್ಬ ಸಚಿವ, ಉನ್ನತ ಅಧಿಕಾರಿ, ಸ್ವತ: ಯಡಿಯೂರಪ್ಪ ಬಳಿಗೆ ಹೋದರು ಏನೊಂದು ಕೆಲಸ ಆಗಿಲ್ಲ, ಕುಟುಂಬದವರ ಮೂಲಕ ವಿಜಯೇಂದ್ರ ಬಳಿಗೆ ಹೋದರೆ ಮಾತ್ರ ಅನುದಾನ ಬಿಡುಗಡೆಯಾಗಿಲಿದೆ, ಇದಕ್ಕಾಗಿಯೇ ಅಧಿಕಾರಿಗಳು ಸಚಿವರು, ಮುಖ್ಯಮಂತ್ರಿ ಗೃಹ ಕಛೇರಿ ಬದಲು, ವಿಜಯೇಂದ್ರ ಪ್ಲಾಟ ಮುಂಭಾಗ ಕೈಕಟ್ಟಿಕೊಂಡು ನಿಲ್ಲುವಂತಹ ಪರಿಸ್ಥಿತಿ ಇದೆ ಎಂದರು.

ಬಾಗಲಕೋಟೆಯಲ್ಲಿ ಆರಂಭಿಸಿರುವ ಜಿಲ್ಲಾ ಕಾಂಗ್ರೇಸ್ ಪಕ್ಷದ ಕಟ್ಟಡಕ್ಕೆ ೧೦ ಸಾವಿರ ರೂ. ದೇಣಿಗೆ ನೀಡಿದರು. ಈ ವೇಳೆ ಗೋವಿಂದ ಕೌಲಗಿ, ನಾಗರಾಜ ಜಾಲಿಕಟ್ಟಿ ಇತರರು ಇದ್ದರು.

Nimma Suddi
";