೨ನೇ ಡೋಸ್ ಪಡೆದ ಸಂಸದ ಗದ್ದಿಗೌಡರ
ಬಾಗಲಕೋಟೆ
ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಸಂಸದ ಪಿ.ಸಿ.ಗದ್ದಿಗೌಡರ ಕೋವಿಡ್19 ಲಸಿಕೆಯ 2ನೇ ‘ಡೋಸ್’ ತೆಗೆದುಕೊಂಡರು.
ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕು 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು.
ಕೊರೊನಾ 2ನೇ ಅಲೆಯಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದೇಶವನ್ನು ಕೊರೊನಾ ಮುಕ್ತವಾಗಿಸೋಣ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಇದ್ದರು.