This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

214 ಜನರಲ್ಲಿ ಕೋವಿಡ್

*312 ಜನ ಗುಣಮುಖ, 214 ಹೊಸ ಪ್ರಕರಣ ದೃಡ*

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 312 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 214 ಕೊರೊನಾ ಪ್ರಕರಣಗಳು ಹಾಗೂ 2 ಮೃತ ಪ್ರಕರಣಗಳು ಗುರುವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 32159 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 28586 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 73, ಬಾದಾಮಿ 39, ಜಮಖಂಡಿ 29, ಹುನಗುಂದ 29, ಮುಧೋಳ 23, ಬೀಳಗಿ 21 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 2080 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತಿ 584141 ನೆಗಟಿವ್ ಪ್ರಕರಣ, ಹಾಗೂ 270 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 3303 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

";