This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಸಚಿವ ನಿರಾಣಿ ಚಾಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮನೆ ಮನೆ ಆರೋಗ್ಯ ತಪಾಸಣೆ ಕೈಗೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ ನಿರಾಣಿ ಚಾಲನೆ ನೀಡಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯತ, ಬೀಳಗಿ ತಾಲೂಕಾ ಪಂಚಾಯತ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗಲಗಲಿ ಗ್ರಾಮದಲ್ಲಿ ಹಮ್ಮಿಕೊಂಡ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು ಕೋವಿಡ್ ಒಬ್ಬರಿಂದ ಒಬ್ಬರಿಗೆ ಹರಡಬಹುದಾದ ಸಾಂಕ್ರಾಮಿಕ ರೋಗವಾಗಿದೆ. ಕೋವಿಡ್‌ನಿಂದಾಗು ಪರಿಣಾಮದ ಕುರಿತು ದಿನನಿತ್ಯ ಕೇಳುತ್ತಿದ್ದೀರಿ. ನಗರದಿಂದ ಈಗ ಗ್ರಾಮ ಮಟ್ಟದಲ್ಲಿ ಈ ಸೋಂಕು ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವೈದ್ಯರು, ನರ್ಸ ಹಾಗೂ ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡವು ಗ್ರಾಮದ ಪ್ರತಿಯೊಂದು ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ. ಗ್ರಾಮಸ್ಥರು ಇದಕ್ಕೆ ಸಹಕಾರ ನೀಡಬೇಕು. ತಪಾಸಣೆಯಿಂದ ಆರೋಗ್ಯದ ಸ್ಥಿತಿಗತಿಗೆ ಅನುಗುಣವಾಗಿ ಔಷಧಗಳನ್ನು ಸಹ ನೀಡಲಿದ್ದಾರೆ. ಕೆಮ್ಮು, ನೆಗಡಿ, ಜ್ವರಗಳು ಬಂದಲ್ಲಿ ಔಷಧಗಳ ಕಿಟ್ ಸಹ ನೀಡಲಿದ್ದಾರೆ. ಇದರಿಂದ ಪ್ರಾರಂಭದಲ್ಲಿಯೇ ಅದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸೋಂಕು ದೇಹದೊಳಗೆ ಸೇರಿ ಉಲ್ಬಣವಾಗುವವರೆಗೆ ಬಿಡಬಾರದು ಎಂಬ ದೃಷ್ಠಿಯಿಂದ ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವ ಉದ್ದೇಶವಾಗಿದೆ ಎಂದು ತಿಳಿಸಿದರು.

ಬೀಳಗಿ ತಾಲೂಕಿನ ಗಲಗಲಿ, ಸಿದ್ದಾಪೂರ, ಸೊನ್ನ ಮತ್ತು ಗಿರಿಸಾರ ಗ್ರಾಮಗಳಿಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು. ವೈದ್ಯರು ಪ್ರತಿದಿನ ೪ ಗ್ರಾಮಗಳಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಔಷಧಿ ಕಿಟ್‌ಗಳನ್ನು ಸಹ ಸಚಿವರು ವಿತರಿಸಿದರು. ಕಾರ್ಯಕ್ರಮದಲ್ಲಿ ಬೀಳಗಿ ತಹಶೀಲ್ದಾರ ಶಂಕರ ಗಾಡಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕಾರ್ತಿಕ ಎಂ, ತಾಲೂಕಾ ವೈದ್ಯಾಧಿಕಾರಿ ಡಾ.ಕರಿಯನ್ನವರ ಸೇರಿದಂತೆ ಡಾ.ಅನಿಲ ಕುಚನೂರ, ಜಯಶ್ರೀ ಮಾದರ, ಮೋಹನ್ ಜಾದವ, ಹೊಳೆಬಸು ಬಾಳಶೆಟ್ಟಿ, ರಾಮಣ್ಣ ಶೇಬಾನಿ, ಶ್ರೀಶೈಲ ಗೋಳಿಪಲ್ಲೆ, ಆನಂದ ಇಂಗಳಗಾವಿ, ಸಂಜಯ ಬಳಿಗಾರ ಉಪಸ್ಥಿತರಿದ್ದರು.

Nimma Suddi
";