This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಲಸಿಕಾ ಅಭಿಯಾನ ಯಶಸ್ವಿಗೊಳಿಸಿ:ಶಿವಯೋಗಿ ಕಳಸದ

ವಿವಿಧ ಕೋವಿಡ್ ಲಸಿಕಾ ಕೇಂದ್ರಗಳಿಗೆ ಭೇಟಿ ಪರಿಶೀಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಳಿಗೆ ಕರೆ ನೀಡಿದರು.

ಗುರುವಾರ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಲಸಿಕೆ ಪಡೆಯುವದರಿಂದಾಗುವ ಪ್ರಯೋಜನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಲಸಿಕೆ ಪಡೆಯುವಂತೆ ಮಾಡಬೇಕು.

ಲಸಿಕೆಯಿಂದ ಯಾರು ವಂಚಿತರಾಗದಂತೆ ನಿಗಾವಹಿಸಬೇಕು. ಜೂನ್ 21 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಬೇಕು. ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಕೊರೊನಾ ನಿಯಂತ್ರಿಸುವಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿದಿಗಳ ಪಾತ್ರ ಮುಖ್ಯವಾಗಿದೆ ಎಂದು ತಿಳಿಸಿದರು.

ನಂತರ ಇಳಕಲ್ ತಾಲೂಕಿನ ಕೆಲೂರ, ಗುಡೂರ, ಹುನಗುಂದ ತಾಲೂಕಿನ ನಾಗೂರ ಗ್ರಾಮಗಳಿಗೆ ಭೇಟಿ ನೀಡಿದ ಕಳಸದ ಅವರು ನರೇಗಾ ಯೋಜನೆಯಡಿ ಜಲಶಕ್ತಿ ಅಭಿಯಾನದಡಿ ಪ್ರಾರಂಭವಾಗಿರುವ ಕಂದಕ ಬದು ಕಾಮಗಾರಿ ಹಾಗೂ ರಸ್ತೆಬದಿ ನಡೆತೋಪು ಕಾಮಗಾರಿಗಳನ್ನು ಪರಿಶೀಲಿಸಿದರು.

ಕೂಲಿ ಕಾರ್ಮಿಕರನ್ನು ಯೋಗಕ್ಷೇಮ ವಿಚಾರಿಸಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವಂತೆ ಕೂಲಿ ಕಾರ್ಮಿಕರಿಗೆ ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹುನಗುಂದದಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಉಸ್ತುವಾರಿ ಕಾರ್ಯದರ್ಶಿಗಳು ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ತಪಾಸಣೆ, ಔಷಧಿ ಹಾಗೂ ಊಟದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಕೂಡಲಸಂಗಮಕ್ಕೆ ಭೇಟಿ ನೀಡಿದರು. ಬೊಮ್ಮನಗಿ ಆರ್.ಸಿ ಸೆಂಟರಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಬಿ.ಕೊಂಗವಾಡ, ತಹಶೀಲ್ದಾರ ಶ್ವೇತಾ ಬಿಡಿಕರ, ಹುನಗುಂದ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಿ.ಬಿ.ಮ್ಯಾಗೇರಿ ಸೇರಿದಂತೆ ಇತರರು ಇದ್ದರು.

.

Nimma Suddi
";