This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಕೋವಿಡ್ ನಿಯಂತ್ರಣದಲ್ಲಿ ಬೀಳಗಿ ಮಾದರಿ ಮತಕ್ಷೇತ್ರ

ಕೊರೊನಾ ವಾರಿಯರ್ಸ್ ಕಾರ್ಯ ಶ್ಲಾಘೀಸಿದ ಸಚಿವ ನಿರಾಣಿ

ನಿಮ್ಮ ಸುದ್ದಿ ಬಾಗಲಕೋಟೆ

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರ ಮಾದರಿಯಾಗಿ ಪರಿಣಮಿಸಿದ್ದು, ಇದಕ್ಕೆ ಶ್ರಮಿಸಿದ ಕೊರೊನಾ ವಾರಿಯರ್ಸಗಳ ಕಾರ್ಯವನ್ನು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ ನಿರಾಣಿ ಶ್ಲಾಘಿಸಿದರು.

ಬೀಳಗಿ ಮತಕ್ಷೇತ್ರದಲ್ಲಿ ಬರುವ ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮ ಪಂಚಾಯತ ಆವರಣದಲ್ಲಿ ಹಮ್ಮಿಕೊಂಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಯ ನಿಯಂತ್ರಣದಲ್ಲಿ ತಾಲೂಕಾ ಅಧಿಕಾರಿಗಳು, ವೈದ್ಯರು ಹಾಗೂ ಇತರೆ ಕೊರೊನಾ ವಾರಿಯರ್ಸಗಳ ಶ್ರಮದಿಂದ ಕೊರೊನಾ ಮುಕ್ತ ತಾಲೂಕಾಗಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಕೈಗೊಂಡಿದ್ದರಿಂದ ಜಿಲ್ಲೆಯ ಎಲ್ಲ ತಾಲೂಕುಗಳಿಗಿಂತ ಪಾಜಿಟಿವಿಟಿ ಪ್ರಮಾಣ ಕಡಿಮೆ ಇದ್ದು, ಈ ಸೊನ್ನೆಗೆ ಬಂದಿದೆ. ಕೊರೊನಾದಿಂದ ಜನ ಪಾಠ ಕಲಿತಿದ್ದು, ಕೋವಿಡ್ ಲಸಿಕೆಯಿಂದಾಗುವ ಪ್ರಯೋಜನವನ್ನು ಅರಿತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಜನ ಮುಂದೆ ಬರುತ್ತಿದ್ದಾರೆ. ಅದೇ ರೀತಿ ಬರುವ 3ನೇ ಅಲೆಯನ್ನು ಸಹ ಎದುರಿಸಲು ಸಜ್ಜಾಗುವದರ ಜೊತೆ ಮಕ್ಕಳ ಬಗ್ಗೆ ಜಾಗೃತಿ ವಹಿಸಲು ತಿಳಿಸಿದರು. ನಂತರ ಗ್ರಾಮದ ಜನರ ಕುಂದು ಕೊರತೆಗಳನ್ನು ಆಲಿಸಿದರು.

ಸಭೆಯಲ್ಲಿ ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ ಪಿಡಿಓ, ಗ್ರಾ.ಪಂ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಚಿಕ್ಕಶೆಲ್ಲಿಕೇರಿ, ತುಳಸಿಗೇರಿ, ದೇವನಾಳ, ಛಬ್ಬಿ ಹಾಗೂ ಯಡಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೇ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದರು.

";