This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಪ್ರವಾಹ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಿ : ಉಮೇಶ ಕತ್ತಿ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಂದ ಉಂಟಾಗಬಹುದಾದ ಪ್ರವಾಹ ನಿಯಂತ್ರಣಕ್ಕೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿಯ ನೂತನ ಸಭಾಭವನದಲ್ಲಿಂದು ಪ್ರವಾಹ ಮುಂಜಾಗ್ರತಾ ಕ್ರಮ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರವಾಹದಿಂದ ೧೮೮ ಗ್ರಾಮಗಳು ಭಾದಿತಗೊಳ್ಳುತ್ತಿದ್ದು, ಅವುಗಳ ಮೇಲೆ ನಿಗಾವಹಿಸಬೇಕು. ಪ್ರವಾಹ ಉಂಟಾದಲ್ಲಿ ಜನರ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗ್ರತವಾಗಿ ಗುರುತಿಸಿದ ೨೫೯ ಕಾಳಜಿ ಕೇಂದ್ರಗಳ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗದAತೆ ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿಯ ಜಿಲ್ಲಾ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ಅವರಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ನಗರ ಪ್ರದೇಶದಲ್ಲಿ ೨೪ ಗಂಟೆಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ ಮೂರುದಿನಗಳೊಳಗಾಗಿ ಟ್ರಾನ್ಸ÷್ಪರ್ಮರ್ ಸೇರಿದಂತೆ ವಿದ್ಯತ್ ಪ್ರಸರಣಕ್ಕೆ ಸಂಭAದಿಸಿದAತ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ಸಚಿವರು ಸೂಚಿಸಿದರು. ರೈತರಿಗೆ ಬೀಜ ಗೊಬ್ಬರಗಳ ಕೊರೆತಯಾಗದಂತೆ ಕ್ರಮವಹಿಸಲು ತಿಳಿಸಿದರು.

ನೆರೆ ಹಾವಳಿಗೆ ಸಂಭAದಿಸಿದAತೆ ಮಾತನಾಡಿದ ಜಿಲ್ಲಾಧಿಕಾರಿ ಕಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಪ್ರವಾಹ ನಿಯಂತ್ರಕ್ಕೆ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಅದಕ್ಕಾಗಿ ಜಿಲ್ಲೆಂiÀi ಎಲ್ಲ ತಾಲೂಕುಗಳ ಒಳಗೊಂಡAತೆ ಒಟ್ಟು ೪೬೬ ಸ್ವಯಂ ಸೇವಕರನ್ನು, ೬೬ ಎನ್‌ಜಿಒ ಗಳನ್ನು, ೪೭೬ ಹಾವು ಹಾವು ಹಿಡಿಯುವವರು ಸೇರಿ ಒಟ್ಟು ೧೦೩೬ ಜನರನ್ನು ಸಿದ್ದಗೊಳಿಸಲಾಗಿದೆ. ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಕುಡಿಯುವ ನೀರು, ಕೋವಿಡ್ ಸೇರಿದಂತೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ೬೬.೯೯ ಕೋಟಿ ರೂ. ಇರುವುದಾಗಿ ತಿಳಿಸಿದರು.

ಜಾನುವಾರುಗಳಿಗೆ ೬೭೯೧೨೬ ಟನ್ ಮೇವಿನ ಸಂಗ್ರಹವಿದೆ. ದಿನದ ೨೪ ಗಂಟೆಗಳ ತುರ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಸೆರ್ಕ್ಯೂ ಉಪಕರಣಗಳನ್ನು ಬೇಡಿಕೆಯಂತೆ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಾದ ಅಕಾಲಿಕ ಮಳೆಯಿಂದ ಸಿಡಿಲಿನಿಂದ ೩ ಜನ ಮೃತಪಟ್ಟಿರುತ್ತಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳಿಗೆ ತಲಾ ೫ ಲಕ್ಷಗಳಂತೆ ಪರಿಹಾರಧನ ನೀಡಲಾಗಿದೆ. ಅಲ್ಲದೇ ೨೯ ಜಾನುವಾರುಗಳು ಸಿಡಿಲಿಗೆ ಬಲಿಯಾಗಿವೆ. ಈ ಪೈಕಿ ೧.೭೭ ಲಕ್ಷ ರೂ.ಗಳ ಪರಿಹಾರಧನ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ ಜಿಲ್ಲೆಯಲ್ಲಿ ಮೊದಲನೇ ಅಲೆಯಲ್ಲಿ ೧೧೬೧ ಜನಕ್ಕೆ ಕೋವಿಡ್ ಸೋಂಕು ದೃಡಪಟ್ಟರೆ, ಎರಡನೇ ಅಲೆಯಲ್ಲಿ ೨೩೮೧ ಜನಕ್ಕೆ ದೃಡಪಟ್ಟಿರುತ್ತದೆ. ಜಿಲ್ಲೆಯಲ್ಲಿ ಸದ್ಯ ೪೬೬ ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ ೩೧೭ ಕೊವಿಡ್ ಕೇರ್ ಸೆಂಟರನಲ್ಲಿದ್ದರೆ ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲನೇ ಅಲೆಯಲ್ಲಿ ೧೩೬ ಜನ ಮೃತಪಟ್ಟರೆ, ೨ನೇ ಅಲೆಯಲ್ಲಿ ೧೭೮ ಜನ ಮೃತಪಟ್ಟಿರುತ್ತಾರೆ. ಜಿಲ್ಲೆಯಲ್ಲಿ ಈಗಾಗಲೇ ೫೩೧೯೯೭ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ. ಅದರಲ್ಲಿ ಕೋವಾಕ್ಸಿನ್ ೧೧೩೫೨೯, ಕೋವಿಡಶಿಲ್ಡ ೪೧೮೪೬೮ ಡೋಸ್ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಟಿ.ಭೂಬಾಲನ್, ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿಗಳಾದ ಎಂ.ಗAಗಪ್ಪ, ಸಿದ್ದು ಹುಲ್ಲೊಳ್ಳಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Nimma Suddi
";