ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ಮಲಪ್ರಭಾ ನದಿಗೆ ಪ್ರವಾಹದ ಮುನ್ಸೂಚನೆ ಇದ್ದು ನದಿ ಪಾತ್ರದ ಜನ ಹಾಗೂ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಕೆ.ಎನ್.ಎನ್.ಎಲ್, ಎಂ.ಎಲ್.ಬಿ.ಸಿ.ಸಿ. ವೃತ್ತದ ಅಧೀಕ್ಷಕ ಅಭಿಯಂತರರು ವಾಯರ್ಲೆಸ್ ಸಂದೇಶ ನೀಡಿದ್ದು, ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಯಾವುದೇ ಸಮಯದಲ್ಲಿ ನವಿಲುತೀರ್ಥ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಬಹುದಾಗಿದೆ.
ಮುನ್ನೆಚ್ಚರಿಕೆಯಾಗಿ ನದಿ ಪಾತ್ರದ ಗ್ರಾಮಗಳ ಜನತೆ ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲು ಕೋರಿದ್ದಾರೆ. ಕೂಡಲೆ ಆಯಾ ತಾಲೂಕು ತಹಸೀಲ್ದಾರರು ಮುನ್ನೆಚ್ಚರಿಕೆ ವಹಿಸಿ ಸೂಕ್ತ ನಿಗಾ ವಹಿಸಬೇಕು ಎಂದು ತುರ್ತು ಸಂದೇಶದಲ್ಲಿ ತಿಳಿಸಿದ್ದಾರೆ.