ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ತಂಡವೊಂದರ ಮೇಲೆ ಅಮೀನಗಡ ಪೊಲೀಸರು ದಾಳಿ ಮಾಡಿದ್ದಾರೆ.
ಭಾನುವಾರ ರಾತ್ರಿ ಈ ದಾಳಿ ನಡೆದಿದ್ದು ಮೂವರು ಸರಕಾರಿ ನೌಕರರು ಸೇರಿದಂತೆ 12ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರಿಗೆ ಬಂದ ಖಚಿತ ಮಾಹಿತಿ ಆಧರಿಸಿ ನಡೆದ ಈ ದಾಳಿಯಲ್ಲಿ ಇಬ್ಬರು ಶಿಕ್ಷಕರು, ಓರ್ವ ಆರೋಗ್ಯ ಇಲಾಖೆ ಸಿಬ್ಬಂದಿಯೂ ಆಕ್ರಮವಾಗಿ ಇಸ್ಪೀಟ್ ಆಟದಲ್ಲಿ ತೊಡಗಿದ್ದರೆಂಬ ಮಾಹಿತಿಯೂ ಇದೆ.
ಬಂಧಿತರಿಂದ 18 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.