This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಜಿಲ್ಲೆಯಾದ್ಯಂತ ಆರಂಭಗೊಂಡ ಅಂಗನವಾಡಿ ಕೇಂದ್ರಗಳು

ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡ ಸಿಇಓ ಭೂಬಾಲನ್

ನಿಮ್ಮ ಸುದ್ದಿ ಬಾಗಲಕೋಟೆ

ಸರಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು, ತಾಲೂಕಿನ ಮುರನಾಳ ಆರ್.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.

ಕೊರೊನಾ ಭೀತಿ ಹಿನ್ನಲೆಯಲ್ಲಿ ಕಳೆದ ಒಂದೂವರೆ ವರ್ಷದ ಬಳಿಕ ಅಂಗನವಾಡಿ ಶಾಲೆಗಳು ಸೋಮವಾರದಿಂದ ಪುನಃ ಆರಂಭಗೊಂಡಿದ್ದು, ಅಂಗನಾಡಿ ಸಿಬ್ಬಂದಿಗಳು ಶಾಲೆಗೆ ಆಗಮಿಸಿದ ಮಕ್ಕಳ ಮೇಲೆ ಪುಷ್ಪವೃಷ್ಠಿಗೈದು ಅದ್ದೂರಿಯಿಂದ ಬರಮಾಡಿಕೊಳ್ಳಲಾಯಿತು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಜಿ.ಪಂ ಸಿಇಓ ಹೂ ನೀಡುವದರ ಜೊತೆಗೆ ಪೇನ್ಸಿಲ್ ಕೂಡಾ ವಿತರಿಸಿದರು. ಸಮವಸ್ತçದೊಂದಿಗೆ ಮಕ್ಕಳ ಖುಷಿಯಿಂದ ಶಾಲೆಗೆ ಆಗಮಿಸಿದ್ದರು.

ನಂತರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಸಿಇಓ ಟಿ.ಭೂಬಾಲನ್ ಅವರು ಪ್ರಾರಂಭಿಕ ಹಂತದಲ್ಲಿ ಮಕ್ಕಳ ಬೆಳವಣಿಗೆಗೆ ಪೌಷ್ಠಿಕ ಆಹಾರ ಅಗತ್ಯವಾಗಿದ್ದು, ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಉತ್ತಮ ಬೆಳೆವಣಿಕೆ ಕಾಣಲು ಸಾಧ್ಯವಾಗುತ್ತದೆ. ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸರಕಾರ ಒದಗಿಸಿದ ಆಹಾರಧಾನ್ಯ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ತಿಳಿಸಿಸದರು.

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪಾಲನೆಯಾಗಬೇಕು. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಹೆಚ್ಚಿನ ನಿಗಾ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಶೇಂಗಾ ಉಂಡೆ ಮತ್ತು ಬೇಯಿಸಿದ ತತ್ತಿಯನ್ನು ನೀಡಲಾಯಿತು.

ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ ಮಕ್ಕಳ ಮತ್ತು ತಾಯಂದಿರ ಮರಣ ಕಡಿಮೆಗೊಳಿಸುವುದು, ವಿವಿಧ ಇಲಾಖೆಯಗ ಸಹಕಾರದಿಂದ ಅಂಗನವಾಡಿ ಮಕ್ಕಳ ಸರ್ವತೋಮುಖ ಬೆಳೆವಣಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದೆಂದರು. ಆರೋಗ್ಯ ತಪಾಸಣೆ, ಪೌಷ್ಠಿಕ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಯೋಜನೆಗಳು ಯಶಸ್ವಿಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾ.ಪಂ ಇಒ ಶಿವಾನಂದ ಕಲ್ಲಾಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪನಾಧಿಕಾರಿ ರಮೇಶ ಸೂಳಿಕೇರಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಮುರನಾಳ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಮಹಾಂತೇಶ ನಾಲತ್ವಾಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

";