ನಿಮ್ಮ ಸುದ್ದಿ ಬಾಗಲಕೋಟೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕಕ್ಕೆ ನೂತನವಾಗಿ ಸದಸ್ಯತ್ವ ಬಯಸುವವರು ಹಾಗೂ ಸದಸ್ಯತ್ವ ನವೀಕರಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ದಿ. ೨೨-೪-೨೦೨೨ ರೊಳಗಾಗಿ ಜಿಲ್ಲಾ ಘಟಕಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ರಾಜ್ಯ ಸಂಘದ ಮಾರ್ಗಸೂಚಿಯಂತೆ ಸದಸ್ಯತ್ವವನ್ನು ಮಾಡಿಕೊಳ್ಳಲಾಗುತ್ತಿದ್ದು ಎಪ್ರೀಲ ೨೨ ರವರೆಗೆ ನಿತ್ಯ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಘದ ಜಿಲ್ಲಾಧ್ಯP ಆನಂದ ಧಲಬಂಜನ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಎಸ್. ಕಲ್ಯಾಣಿ ಅವರು ಕೋರಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾರ್ಗಸೂಚಿಯಂತೆ ಜಿಲ್ಲೆಯ ವಿವಿಧ ತಾಲೂಕಾವಾರು ಸದಸ್ಯತ್ವ ಪಡೆಯುವ ಅರ್ಹ ಸದಸ್ಯರುಗಳು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಾ ಘಟಕದ ಅಧ್ಯPರು, ತಾಲೂಕಾ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು, ಆ ಮೂಲಕ ತಾಲೂಕಾ ಘಟಕದವರು ಅರ್ಜಿಗಳನ್ನು ಸಂಗ್ರಹಿಸಿ ಜಿಲ್ಲಾ ಘಟಕಕ್ಕೆ ಸಲ್ಲಿಸಬೇಕು.
ಜಿಲ್ಲಾ ಕೇಂದ್ರವಾಗಿರುವ ಬಾಗಲಕೋಟೆ ನಗರ ಸೇರಿದಂತೆ ಬಾಗಲಕೋಟೆ ತಾಲೂಕಾ ಘಟಕದವರು ಅರ್ಹ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ನವನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸಲ್ಲಿಸಬೇಕೆಂದು ಈ ಮೂಲಕ ಕೋರಲಾಗಿದೆ.
ಈ ಬಾರಿ ಸದಸ್ಯತ್ವ ನವೀಕರಣದ ಅರ್ಜಿ ಸಲ್ಲಿಸಲು ಕಾಲಾವಕಾಶ ಕಡಿಮೆ ಇದ್ದು, ದಿ. ೨೨ ರೊಳಗೆ ಅರ್ಜಿ ಸಲ್ಲಿಸಬೇಕು, ನಂತರ ಬಂದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವದಿಲ್ಲ ಎಂದು ಅವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.