ಡಾ.ದೇವರಾಜ್ ಪಾಟೀಲ್ ಜೆಡಿಎಸ್ ಸೇರ್ಪಡೆ
ನಿಮ್ಮ ಸುದ್ದಿ ಬಾಗಲಕೋಟೆ
ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಡಾ.ದೇವರಾಜ್ ಪಾಟೀಲ ಅವರು ಜೆಡಿಎಸ್ ಪಕ್ಷಕ್ಕೆ ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಸೇರ್ಪಡೆಯಾಗಲಿದ್ದಾರೆ.
ಜೆಡಿಎಸ್ ಸೇರ್ಪಡೆ ಕುರಿತು ಸ್ಪಷ್ಟಪಡಿಸಿದ ದೇವರಾಜ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಬಾಗಲಕೋಟೆ ಮತಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗುತ್ತಾ ಬಂದಿದ್ದು, ಕಳೆದ ಮೂರು ಬಾರಿ ನನಗೆ ಟಿಕೆಟ್ ತಪ್ಪಿದೆ. ಈ ಬಾರಿ ಟಿಕೆಟ್ ದೊರೆಯುವ ನಿರೀಕ್ಷೆಯಿತ್ತು. ಆದರೆ ಟಿಕೆಟ್ ನೀಡಲಿಲ್ಲ. ನಾನು ಯಾರನ್ನು ಸೋಲಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನನ್ನ ಗೆಲುವಿಗಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ಮತಕ್ಷೇತ್ರದಲ್ಲಿ ನನಗೆ ಅಪಾರ ಬೆಂಬಲ ಇದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಪ್ಪಿದ ಹಿನ್ನೆಲೆ ನನ್ನ ಬೆಂಬಲಗರ ಜೊತೆ ಸಭೆ ನಡೆಸಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳಲು ನಿರ್ಧರಿಸಿದ್ದೇನೆ ಎಂದು ಹೇಳಿದರು.