This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Sports News

ನಾಲ್ಕನೇ T20 ಯಲ್ಲಿ ಈ ಆಟಗಾರ ಆಡಲ್ಲ

ನಾಲ್ಕನೇ T20 ಯಲ್ಲಿ ಈ ಆಟಗಾರ ಆಡಲ್ಲ

ನಿಮ್ಮ ಸುದ್ದಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ T20 ಅಂತರಾಷ್ಟ್ರೀಯ ಸರಣಿಯ ನಾಲ್ಕನೇ ಪಂದ್ಯವು ಶನಿವಾರ ಅಂದರೆ ಆಗಸ್ಟ್ 12 ರಂದು ರಾತ್ರಿ 8 ಗಂಟೆಗೆ ಅಮೇರಿಕಾದ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಲಿದೆ. ಭಾರತದಿಂದ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು ಇನ್ನೂ 2-1 ಅಂತರದಲ್ಲಿ ಮುನ್ನಡೆಯಲ್ಲಿದೆ. ಹೀಗಾಗಿ ಟೀಂ ಇಂಡಿಯಾ ಮುಂದಿನ ಎರಡೂ ಟಿ20 ಪಂದ್ಯಗಳನ್ನು ಗೆದ್ದರೆ ಮಾತ್ರ ಸರಣಿ ಕೈ ವಶವಾಗಲಿದೆ. ನಾಲ್ಕನೇ ಟಿ20 ಪಂದ್ಯಕ್ಕಾಗಿ ಪ್ಲೇಯಿಂಗ್ 11 ರಲ್ಲಿ ದೊಡ್ಡ ಬದಲಾವಣೆಗಳಾಗಬಹುದು.

ಆರಂಭಿಕ ಬ್ಯಾಟ್ಸ್‌ಮನ್:

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಓಪನಿಂಗ್ ಮಾಡಬಹುದು. ಶುಭಹಮನ್ ಗಿಲ್ ಅವರನ್ನು ಕೈಬಿಡಬಹುದು. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶುಭಮನ್ ಗಿಲ್ ಅವರ ಬ್ಯಾಟ್ ಮೌನವಾಗಿದೆ. ಪ್ರತಿ ಪಂದ್ಯದಲ್ಲೂ ಸೋಲು ಅನುಭವಿಸುತ್ತಲೇ ಇದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಜೋಡಿ ಪವರ್-ಪ್ಲೇನಲ್ಲಿ ರನ್ ಲೂಟಿ ಮಾಡುವಲ್ಲಿ ಪ್ರವೀಣರಾಗಿದ್ದಾರೆ.

ಮಧ್ಯಮ ಕ್ರಮಾಂಕ:

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಉಪನಾಯಕ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌’ಗೆ ಬರಲಿದ್ದಾರೆ. ಭಾರತೀಯ ತಂಡದ ಮ್ಯಾನೇಜ್‌’ಮೆಂಟ್ ತಿಲಕ್ ವರ್ಮಾ ಅವರಿಗೆ ಪ್ಲೇಯಿಂಗ್ ಇಲೆವೆನ್‌’ನಲ್ಲಿ 4ನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಲಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಲಿದ್ದಾರೆ.

ಆಲ್’ರೌಂಡರ್‌’ಗಳು:

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. 7ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಗುತ್ತದೆ. ಅಕ್ಷರ್ ಪಟೇಲ್ ಸ್ಪಿನ್ ಬೌಲಿಂಗ್‌’ನೊಂದಿಗೆ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ನಲ್ಲಿ ಬಲಪಡಿಸಲಿದ್ದಾರೆ.

ಸ್ಪಿನ್ ಬೌಲಿಂಗ್ ವಿಭಾಗ:

ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಯುಜ್ವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆಯಾಗಲಿದ್ದಾರೆ.

ವೇಗದ ಬೌಲಿಂಗ್ ವಿಭಾಗ:

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ವೇಗದ ಬೌಲರ್’ಗಳಲ್ಲಿ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್’ಗೆ ಅವಕಾಶ ನೀಡಲಿದ್ದಾರೆ. ಉಮ್ರಾನ್ ಮಲಿಕ್ ಮತ್ತು ಅವೇಶ್ ಖಾನ್ ಹೊರಗುಳಿಯಬೇಕಾಗುತ್ತದೆ.

ನಾಲ್ಕನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಆಟಗಾರರ ಪ್ಲೇಯಿಂಗ್ XI:

ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.

ಇನ್ನುಳಿದ ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ ನಡೆಯುವ ಸ್ಥಳ:

4ನೇ ಟಿ20 ಪಂದ್ಯ, ಆಗಸ್ಟ್ 12, ರಾತ್ರಿ 8.00, ಫ್ಲೋರಿಡಾ

5ನೇ ಟಿ20 ಪಂದ್ಯ, ಆಗಸ್ಟ್ 13, ರಾತ್ರಿ 8.00, ಫ್ಲೋರಿಡಾ

Nimma Suddi
";