This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education NewsNational NewsState News

ಮಹಿಳೆಗೆ ಸಿಎಂ ಯೋಗ:ಕೋಡಿ ಮಠದ ಸ್ವಾಮೀಜಿ ಭವಿಷ್ಯ

ಮಹಿಳೆಗೆ ಸಿಎಂ ಯೋಗ:ಕೋಡಿ ಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ

ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ, ಮನುಷ್ಯ ಹಣದ ಹಿಂದೆ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಬೆಳಗಾವಿಯಲ್ಲಿ ಸ್ವಾಮೀಜಿ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ.ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ.ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದ ಸ್ವಾಮೀಜಿ, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ ಎಂದು ಸ್ವಾಮಿಜಿ ಹೇಳಿದ್ದಾರೆ.

ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು. ಪ್ರಾಕೃತಿಕ ದೋಷದಿಂದಲೇ ಸಾವು ನೋವು ಹೆಚ್ಚುತ್ತಿವೆ.ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು.ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೆ ಬಿತ್ತಿ ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಎಂದು ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.

ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ.ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ,ಮೊದಲು ಅಂತರ್ಜಲ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ, ಹೀಗಾಗಿ ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ, ಆದರೆ ಮನುಷ್ಯ ಈತನನ್ನು ಮರೆತಿದ್ದಾನೆ. ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗ್ತಿವೆ.ಎಂದು ಸ್ವಾಮೀಜಿ ಕಳವಳ ವ್ಯಕ್ತ ಪಡಿಸಿದ್ದಾರೆ.

ರಾಜ್ಯ ರಾಜಕಾರಣದ ಕುರಿತಾದ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣದ ಬಗ್ಗೆ ಏನೂ ಹೇಳಲ್ಲ, ಆದರೆ ಸರ್ಕಾರಕ್ಕೆ ತೊಂದರೆಯಿಲ್ಲ. ಪಕ್ಷಾಂತರ ಬಗ್ಗೆಯೂ ಚುನಾವಣೆ ಪೂರ್ವವೇ ಹೇಳಿದ್ದೆ. ರಾಜಕೀಯ ಅಲ್ಲೋಲ, ಕಲ್ಲೋಲ ಆಗಲಿದೆ ಎಂದು ಹೇಳಿದ್ದೆ ಈಗ ಅಸ್ಥಿರತೆ ಉಂಟಾಗುತ್ತಿದೆ. ಈ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ? ಎಂಬ ಪ್ರಶ್ನೆಗೆ, ಇವರದ್ದು ಮುಗಿಲಿ, ಎಲ್ಲವನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ, ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಸಲಹೆ ಮಾಡಿದ್ದಾರೆ.

Nimma Suddi
";