*ಬವಿವಿ ಸಂಘದ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ,ವಾಣಿಜ್ಯ,ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡದ ಉಧ್ಘಾಟನಾ ಹಾಗೂ ಪೂಜಾ ಸಮಾರಂಭ
ಬಾಗಲಕೋಟೆ :
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉನ್ನತ ದರ್ಜೆಯ ಸೌಲಭ್ಯ ನೀಡುವಲ್ಲಿ ಬಿ.ವ್ಹಿ.ವ್ಹಿ.ಸಂಘ ಸದಾ ಮುಂದು ಎಂದು ಮಾಜಿ ಶಾಸಕ ಹಾಗೂ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಹೇಳಿದರು.
ಅವರು ನಗರದ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ,ವಾಣಿಜ್ಯ,ವಿಜ್ಞಾನ ಮಹಾವಿದ್ಯಾಲಯದ ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡದ ಉಧ್ಘಾಟನೆ ಹಾಗೂ ಪಾಲಿಟೆಕ್ನಿಕ್ ಕ್ಯಾಂಪಸ್ ಹಿಂಭಾಗದ ಆವರಣದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ಪೂಜೆ ಹಾಗೂ ನೂತನ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳು ಉನ್ನತ ಮಟ್ಟದ ಜ್ಞಾನ ಮತ್ತು ಅನುಭವದೊಂದಿಗೆ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಲು ಬಿ.ವ್ಹಿ.ವ್ಹಿ.ಸಂಘವು ಉನ್ನತ ದರ್ಜೆಯ ಸೌಲಭ್ಯಗಳನ್ನು ಒದಗಿಸುತ್ತ ಬಂದಿರುವುದು ಹೆಮ್ಮೆಯ ವಿಷಯವಾಗಿದೆ.ಆ ನಿಟ್ಟಿನಲ್ಲಿ ಈ ನೂತನ ಕಟ್ಟಡಗಳಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ಜ್ಞಾನಾರ್ಜನೆಗಾಗಿ ಆಧುನಿಕ ಮಾಹಿತಿ ತಂತ್ರಜ್ಞಾನ ಹಾಗೂ ಆಧುನಿಕ ಸೌಲಭ್ಯ ನಿಡುವಲ್ಲಿ ಬಿ.ವ್ಹಿ.ವ್ಹಿ.ಸಂಘ ಸದಾ ಮುಂದೆ ಇರುತ್ತದೆ ಎಂದರು.
ಬಿವ್ಹಿವ್ಹಿಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, , ಕಾಲೇಜಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ಐ.ಟಿ.ಐ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಕಟ್ಟಡಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಪ್ರಾಚಾರ್ಯ ಟಿ.ಎಸ್. ಪಾಟೀಲ, ಪ್ರಾಚಾರ್ಯ ಎಸ್.ಜೆ.ಒಡೆಯರ, ಸಂಘದ ಸದಸ್ಯರು, ಹಾಗೂ ಮಹಾವಿದ್ಯಾಲಯಗಳ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.