ಬೆಂಗಳೂರು
ಮುಖ್ಯಮಂತ್ರಿ Siddaramaiah ಅವರು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದಮೇಳದ ಯ.
ಹಗಲಿರುಳೆನ್ನದೇ ಕಾರ್ಯನಿರ್ವಹಿಸುವ ಪೋಲಿಸ್ ಪಡೆಗಳ ಕಾರ್ಯವನ್ನು ಶ್ಲಾಘಿಸಿ, ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು ಎಂದರು.
ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ. ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಾವು ಪರಿಣಾಮಕಾರಿಯಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಗೃಹ ಸಚಿವರಾದ DR. G Parameshwara, ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.