This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Agriculture NewsState News

ಬರ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ : ಡಿಸಿ ಜಾನಕಿ

ಬರ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ : ಡಿಸಿ ಜಾನಕಿ

ಬಾಗಲಕೋಟೆ:

ರಾಜ್ಯ ಸರಕಾರ ಜಿಲ್ಲೆಯಲ್ಲಿ ಬರುವ 9 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಬರ ನಿರ್ವಹಣೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಾರದು. ಸಮಸ್ಯೆ ಇದ್ದಲ್ಲಿ ಕ್ರೀಯಾ ಯೋಜನೆ ರೂಪಿಸಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ತಕ್ಷಣ ನೀಡಬೇಕು. ಜೆಜೆಎಂ ಯೋಜನೆ ಕಾಮಗಾರಿ ಗುಣಮಟ್ಟವಾಗಿರಬೇಕು. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಲಿ ತಿಳಿಸಿದ ಜಿಲ್ಲಾಧಿಕಾರಿಗಳು ವಾರದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ನೀರು ಸರಬರಾಜಿನ ಟ್ಯಾಂಕರ್‍ಗಳನ್ನು ಸ್ವಚ್ಛಗೊಳಿಸಿ ವರದಿ ಸಲ್ಲಿಸಲು ಗ್ರಾಮ ಪಂಚಾಯತ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಸರಕಾರಿ ಆಸ್ಪತ್ರೆಗಳು ಸುಧಾರಣೆ ಆಗಬೇಕು. ವೈದ್ಯಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಬೇಕು. ಔಷಧ ಲಭ್ಯದ ಬಗ್ಗೆ ಗಮನ ಹರಿಸಬೇಕು. ಆಸ್ಪತ್ರೆಯಲ್ಲಿ ಬೆಡ್, ಕುಡಿಯುವ ನೀರಿನ ನಿರ್ವಹಣೆ ಮಾಡಬೇಕು. ತಾಲೂಕಾ ಆರೋಗ್ಯ ಇಲಾಖೆಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ದೂರುಗಳು ಬರಬಾರದು. ಮಂಜೂರಾತಿಗೆ ತಕ್ಕಂತೆ ನೇಮಕಾತಿ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಪೂರೈಕೆಯಾಗುವ ಆಹಾರ ದಾನ್ಯಗಳ ಗುಣಮಟ್ಟದ ಬಗ್ಗೆ ಪರಿಶೀಲಿಸಬೇಕು. ವಿತರಣೆಯಲ್ಲಿ ಯಾವುದೇ ರೀತಿಯ ಲೋಪ ಕಂಡರು ಸರಿಪಡಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿರುವ 367 ಅಂಗನವಾಡಿ ಕಟ್ಟಡಗಳಿಗೆ ಜಾಗದ ಸಮಸ್ಯೆ ಇರುವುದು ಕಂಡುಬಂದಿದ್ದು, ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳಿದ್ದಲ್ಲಿ ಮಾಹಿತಿಯನ್ನು ಪಡೆಯಲು ತಿಳಿಸಿದರು.

ಬರ ಘೋಷಣೆ ಹಿನ್ನಲೆಯಲ್ಲಿ ಕೃಷಿ ಇಲಾಖೆಯವರು ಸೆಪ್ಟೆಂಬರ 30 ರೊಳಗೆ ನೂರಕ್ಕೆ ನೂರರಷ್ಟು ಸರ್ವೆ ಕಾರ್ಯ ಪೂರ್ಣಗೊಳ್ಳಬೇಕು. ಪಶು ಇಲಾಖೆಯವರು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇಲು ಲಭ್ಯತೆಗೆ ಕ್ರಮವಹಿಸಲು ತಿಳಿಸಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿವಿಧ ಹಾಸ್ಟೆಲ್‍ಗಳ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು. ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರ ಪದಾರ್ಥಗಳ ಬಗ್ಗೆ ಆಗಾಗ್ಗೆ ಅಧಿಕಾರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮೂಲಭೂತ ಸೌಲಭ್ಯ, ಕುಡಿಯುವ ನೀರಿನ ಬಗ್ಗೆ ಪರಿಶೀಲಿಸಲು ತಿಳಿಸಿದ ಜಿಲ್ಲಾಧಿಕಾರಿಗಳು ವಸತಿ ನಿಲಯಕ್ಕೆ ಬೇಕಾದ ನಿವೇಶನ ಬಗ್ಗೆ ಕ್ರಮವಹಿಸಲು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯವರು ಶಾಲಾ ಕೊಠಡಿಗಳ ಸ್ಥಿತಿಗತಿ ಬಗ್ಗೆ ಗಮನಹರಿಸುತ್ತಿಲ್ಲ. ಅಂದಾಜು 300 ರಿಂದ 400 ಕೊಠಡಿಗಳ ದುರಸ್ಥಿಗೆ ಅನುಮತಿ ನೀಡಿದ್ದರು ದುರಸ್ಥಿ ಕೆಲಸ ಆಗುತ್ತಿಲ್ಲವೆಂದರು. ಶಾಲಾ ಕೊಠಡಿ ದುರಸ್ಥಿ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿ.ಪಂ ಸಿಇಓ ಶಶಧರ ಕುರೇರ ಅಭಿಯಂತರಗಳನ್ನು ಬ್ಲಾಕ್ ಲಿಸ್ಟನಲ್ಲಿ ಇಡಲು ಪಂಚಾಯತ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯಲ್ಲಿಯೂ ಸಹ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವದನ್ನು ತಿಳಿದು ಅಧಿಕಾರಿಗಳಿಗೆ ಕ್ರಮವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಮುಖ್ಯ ಯೋಜನಾಧಿಕಾರಿ ನಿರ್ಮಲ, ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್ . .
*ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಿ*
ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂಧಿಸಬೇಕು. ಕರೆಗಳು ಸಹ ಬಂದಾಗ ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸುವ ಮೂಲಕ ಸರಕಾರಿ ಕೆಲಸದಲ್ಲಿ ಬದಲಾವಣೆ, ಸುಧಾರಣೆಗೊಂಡ ಬಗ್ಗೆ ಸಾರ್ವಜನಿಕರಿಗೆ ತೋರಿಸಿಕೊಟ್ಟು ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಸುವ ಕೆಲಸ ಮಾಡಬೇಕು.
– *ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ*

";