ಬಾಗಲಕೋಟೆ :
ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಜಿಲ್ಲೆಯ ಸಹೋದರಿಯರಾದ ಚಂದನಾ ಚಪ್ಪರದಳ್ಳಿಮಠ ಪ್ರಥಮ ಸ್ಥಾನ ಪಡೆದರೆ, ಹರ್ಷಿತಾ ಚಪ್ಪರದಳ್ಳಿಮಠ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಬಾಲಭವನ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಂಡ ಹಮ್ಮಿಕೊಂಡಿದ್ದ ಸಾಂಸ್ಕøತಿ ಸ್ಪರ್ಧೆಗಳಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸ್ಪಧೆಯಲ್ಲಿ ಜಿಲ್ಲೆಯ ಸಹಯೋದರಿಯರು ಪ್ರಥಮ ಹಾಗೂ ತೃತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಂದ ಪಡೆದುಕೊಂಡರು.
ಸಾಧನೆ ಮಾಡಿದ ಸಹಯೋದರಿಯರನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಹಾಗೂ ಜಿಲ್ಲಾ ಬಾಲಭವನದ ಅದ್ಯಕ್ಷರಾದ ಶಶಿಧರ ಕುರೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಅಮರೇಶ ಎಚ್ ಅಭಿನಂದನೆ ಸಲ್ಲಿಸಿದ್ದಾರೆ.