ಬೆಂಗಳೂರು
ಲೋಕಸಭೆ ಚುನಾವಣೆಯ ಸೆಮಿಫೈನಲ್ ಚುನಾವಣೆ ಎಂದೆ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಮತ ಎಣಿಕೆ ನಡೆದಿದೆ.
ರಾಜಸ್ತಾನ, ಮದ್ಯಪ್ರದೇಶ, ಮಿಜೋರಾಂ, ತೆಲಂಗಾಣ ಹಾಗೂ ಛತ್ತಿಸಘಡ ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆದಿತ್ತು.
ಭಾನುವಾರ ನಡೆಯುತ್ತಿರುವ ಮತ ಎಣಿಕೆಯಲ್ಲಿ ರಾಜಸ್ತಾನ ಹಾಗೂ ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಛತ್ತಸಘಡದಲ್ಲಿ ಮಾತ್ರ ಎರಡೂ ಪಕ್ಷಗಳ ಮಧ್ಯೆ ಹಾವು ಏಣಿ ಆಟ ಮುಂದುವರೆದಿದೆ.
ಮಧ್ಯಪ್ರದೇಶ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.
230 ವಿಧಾನಸಭಾ ಕ್ಷೇತ್ರಗಳ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಭಾರತೀಯ ಜನತಾ ಪಾರ್ಟಿ143 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 86 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ರಾಜಸ್ತಾನ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.
199 ವಿಧಾನಸಭಾ ಕ್ಷೇತ್ರಗಳ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 100 ಮ್ಯಾಜಿಕ್ ಸಂಖ್ಯೆಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಭಾರತೀಯ ಜನತಾ ಪಾರ್ಟಿ119 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ತೆಲಂಗಾಣ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಮುನ್ನಡೆಯಲ್ಲಿದ್ದರೆ, ಆಡಳಿತಾರೂಡ ಬಿಆರ್ಎಸ್ ಹಿನ್ನಡೆ ಅನುಭವಿಸಿದೆ.
119 ವಿಧಾನಸಭಾ ಕ್ಷೇತ್ರಗಳ ತೆಲಂಗಾಣದಲ್ಲಿ ಬಹುಮತಕ್ಕೆ 60 ಮ್ಯಾಜಿಕ್ ಸಂಖ್ಯೆಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಕಾಂಗ್ರೆಸ್ 60 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಆರ್ಎಸ್ 51 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಇನ್ನೂ ಛತ್ತಿಸಘಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಹಾವು ಏಣಿ ಆಟ ಮುಂದುವರೆದಿದ್ದು ಸದ್ಯದ ಟ್ರೆಂಡ್ ಪ್ರಕಾರ 90 ಕ್ಷೇತ್ರಗಳ ಮ್ಯಾಜಿಕ್ ನಂಬರ್ ಗೆ ಬೇಕಾದ 46 ಸಂಖ್ಯೆಯ ನ್ನು ಕಾಂಗ್ರೆಸ್ ತಲುಪಿದ್ದು ಬಿಜೆಪಿ 43 ಕ್ಷೇತ್ರಗಳಲ್ಲಿ ಮುನ್ನಡೆ ಯಲ್ಲಿದೆ.