ಬಾಗಲಕೋಟೆ
ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಡಿ.೨೩ ರಂದು ನವನಗರದ ಕಲಾಭವನದಲ್ಲಿ ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಮೇಳ ಮತ್ತು ರಾಷ್ಟಿçÃಯ ರೈತರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷö್ಮಣ ಕಳ್ಳೇನ್ನವರ ತಿಳಿಸಿದ್ದಾರೆ.
ಪ್ರಕಟಣೆಯಲ್ಲಿ ತಿಳಿಸಿದ ಅವರು, ೨೦೨೩ನೇ ವರ್ಷವನ್ನು ಅಂತರರಾಷ್ಟಿçÃಯ ಸಿರಿಧಾನ್ಯಗಳ ವರ್ಷವೆಂದು ಆಚರಿಸಲಾಗುತ್ತಿದ್ದು, ೨೦೨೪ ಜ.೫ ರಿಂದ ೭ರವರೆಗೆ ಅಂತರರಾಷ್ಟಿçÃಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಮೇಳ ಹಮ್ಮಿಕೊಳ್ಳಲಾಗುತ್ತಿದೆ.
ಅಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕಾರ್ಯಕ್ರಮ ಉದ್ಘಾಟಿಸಲಿದ್ದು ಶಾಸಕ ಎಚ್.ವೈ.ಮೇಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಜನಪ್ರತಿನಿಗಳು, ಗಣ್ಯರು ಆಗಮಿಸಲಿದ್ದಾರೆ.
ಮಧ್ಯಾಹ್ನ ೧೨ ರಿಂದ ಸಂಜೆ ೪ರವರೆಗೆ ಸಿರಿಧಾನ್ಯ ಸಂಸ್ಕರಣೆ, ಮೌಲ್ಯಸರಪಳಿ ಕುರಿತು ಉತ್ಪಾದಕರು-ಮಾರುಕಟ್ಟೆದಾರರ ಕಾರ್ಯಾಗಾರ ನಡೆಯಲಿದೆ. ಮಧ್ಯಾಹ್ನ ೨.೩೦ ರಿಂದ ಸಂಜೆ ೫ರವರೆಗೆ ತಾಂತ್ರಿಕ ವಿಚಾರ ಗೋಷ್ಠಿ ನಡೆಸಲಾಗುತ್ತಿದೆ. ಸಾವಯವ ಕೃಷಿ ಮತ್ತು ಸಿರಿಧಾನ್ಯ ಬೆಳೆಗಳ ಉತ್ಪಾದನೆ ತಾಂತ್ರಿಕತೆಗಳ ಕುರಿತು ವಿಜಯಪುರದ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎ.ಪಿ.ಬಿರಾದಾರ, ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಮಹತ್ವ ಮತ್ತು ಬಳಕೆ ಕುರಿತು ಡಾ.ಕಾಶಿನಾಬಾಯಿ ಬ್ಯಾಡಗಿ, ಕೃಷಿ ಉತ್ಪನ್ನಗಳ ಕೋಯ್ಲೋತ್ತರ ಮಾರುಕಟ್ಟೆ ಸಂಪರ್ಕ ಕುರಿತು ಈರಣ್ಣ ರೊಟ್ಟಿ ತಾಂತ್ರಿಕ ಗೋಷ್ಠಿ ನಡೆಯಲಿದೆ. ರಾಷ್ಟç ಮಟ್ಟದ ಪ್ರಶಸ್ತಿ ವಿಜೇತ ಧರಿಯಪ್ಪ ಕಿತ್ತೂರ ಅವರು ಸಾವಯವ ಕೃಷಿ ಕುರಿತು ರೈತರ ಅನಿಸಿಕೆ ವ್ಯಕ್ತಪಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.