ಬಾಗಲಕೋಟೆ
ಜಿಲ್ಲೆಯಲ್ಲಿ ರೈತರು ಬೆಳೆ ನಷ್ಟ ಪರಿಹಾರ ಪಡೆಯಲು ರೈತರು ತಾವು ಹೊಂದಿರುವ ಎಲ್ಲ ಜಮೀನಿನ ಸರ್ವೇ ನಂಬರ್‌ನ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಜಿಲ್ಲೆಯನ್ನು ಸಂಪೂರ್ಣವಗಿ ಬರಪೀಡಿತ ಜಿಲ್ಲೆಯಂದು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಪುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದಲ್ಲಿ ಹಾಗೂ ಬೆಳೆ ಸಮೀಕ್ಷೆ ಆಧಾರದಲ್ಲಿ ಪರಿಹಾರ ವಿತರಿಸಲಾಗುತ್ತದೆ. ಹೀಗಾಗಿ ರೈತರು ತಮ್ಮ ಎಲ್ಲಾ ಸರ್ವೇ ನಂಬರ್‌ಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ.
ಬೆಳೆ ನಷ್ಟ ಪರಿಹಾರವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ರೈತರು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯೊಂದಿಗೆ ಎನ್‌ಪಿಸಿಐ ಮ್ಯಾಪಿಂಗ್ ಕೂಡಾ ಅತ್ಯವಶ್ಯವಾಗಿದೆ. ಜಿಲ್ಲೆಯ ೫,೩೯,೬೨೧ ರೈತರ ತಾಕುಗಳ ಪೈಕಿ ೪,೩೩,೮೫೧ ರೈತರ ತಾಕುಗಳ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ೧,೦೫,೭೭೦ ಭೂ-ಹಿಡುವಳಿಗಳ ನೋಂದಣಿ ಕಾರ್ಯ ಫ್ರೂಟ್ಸ್ ತಂತ್ರಾAಶದಲ್ಲಿ ಬಾಕಿ ಇರುತ್ತದೆ.
ಜಿಲ್ಲೆಯು ಫ್ರೂಟ್ಸ್ ತಂತ್ರಾAಶದಲ್ಲಿ ರೈತರ ಜಮೀನಿನ ವಿವರ ದಾಖಲಿಸುವಲ್ಲಿ (ಶೇ.೮೦.೪೦) ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ರೈತರು ಬೆಂಬಲ ಬೆಲೆ ಯೋಜನೆಗಾಗಿ, ಬ್ಯಾಂಕ್‌ನಿAದ ಬೆಳೆ ಸಾಲ ಪಡೆಯಲು, ಬೆಳೆ ವಿಮೆ ಪರಿಹಾರ, ಬೆಳೆ ಸಮೀಕ್ಷೆ ಮಾಹಿತಿ, ಬೆಳೆ ಹಾನಿ ಪರಿಹಾರ, ಕೃಷಿ ಪರಿಕರ ಮತ್ತು ಸಹಾಯಧನಕ್ಕಾಗಿ ಫ್ರೂಟ್ಸ್ ತಂತ್ರಾAಶದಲ್ಲಿ ಪಹಣಿ ಜೋಡಣೆÂ ಅತ್ಯವಶ್ಯಕವಾಗಿದೆ.
ರೈತರು, ಬೇರೆ ಕಡೆ ನೆಲೆಸಿರುವ ಜಮೀನು ಮಾಲೀಕರು, ಹೊಸದಾಗಿ ಭೂಮಿ ಖರೀದಿಸಿರುವ ರೈತರು ಮತ್ತು ಇತ್ತೀಚಿಗೆ ವಾರ್ಸಾ ಹೊಂದಿರುವವರು ಸೂಕ್ತ ದಾಖಲೆಗಳೊಂದಿಗೆ ಹತ್ತಿರದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಕಾರಿ, ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಇಲಾಖೆ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಸಂಖ್ಯೆ ಪಡೆದುಕೊಳ್ಳಬೇಕು. ಈಗಾಗಲೇ ಎಫ್‌ಐಡಿ ಹೊಂದಿದÀ ರೈತರು ತಮ್ಮ ಎಲ್ಲಾ ಭೂ-ಹಿಡುವಳಿಗಳ ಮಾಹಿತಿಯನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿಕೊಳ್ಳುವAತೆ ಡಿಸಿ ಸೂಚಿಸಿದ್ದಾರೆ.