This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ರಾಜ್ಯಕ್ಕೆ ಬಾಗಲಕೋಟೆ ಜಿಲ್ಲೆ ಪ್ರಥಮ:ಡಿಸಿ ಜಾನಕಿ

ರಾಜ್ಯಕ್ಕೆ ಬಾಗಲಕೋಟೆ ಜಿಲ್ಲೆ ಪ್ರಥಮ:ಡಿಸಿ ಜಾನಕಿ

ಬಾಗಲಕೋಟೆ

ರೈತರ ಸಾಗುವಳಿ ಜಮೀನುಗಳ ವೀಸ್ತೀರ್ಣವನ್ನು ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಕಾರ್ಯದಲ್ಲಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ.

ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಪುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ಬೆಳೆ ನಷ್ಟ ಪರಿಹಾರವನ್ನು ವಿತರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ರೈತರು ತಾವು ಹೊಂದಿರುವ ಎಲ್ಲಾ ಸರ್ವೇ ನಂಬರಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿತ್ತು.

ಬೆಳೆ ನಷ್ಟ ಪರಿಹಾರವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಪ್ರಸ್ತುತ ಜಿಲ್ಲೆಯ ೫,೨೨,೩೬೭ ರೈತರ ತಾಕುಗಳ ಪೈಕಿ ೪,೩೮,೭೫೪ ರೈತರ ತಾಕುಗಳ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ೮೩,೬೧೩ ಭೂ-ಹಿಡುವಳಿಗಳ ನೋಂದಣಿ ಕಾರ್ಯ ಬಾಕಿ ಇರುತ್ತದೆ.

ಜಿಲ್ಲೆಯು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ವಿವರಗಳನ್ನು ದಾಖಲಿಸುವಲ್ಲಿ (ಶೇ.೮೩.೯೯) ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ರೈತರು ಬೆಂಬಲ ಬೆಲೆ ಯೋಜನೆಗಾಗಿ, ಬ್ಯಾಂಕ್‌ನಿAದ ಬೆಳೆ ಸಾಲ ಪಡೆಯಲು, ಬೆಳೆ ವಿಮೆ ಪರಿಹಾರ ಪಡೆಯಲು, ಬೆಳೆ ಸಮೀಕ್ಷೆ ಮಾಹಿತಿ, ಬೆಳೆ ಹಾನಿ ಪರಿಹಾರ, ಕೃಷಿ ಪರಿಕರ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಫ್ರೂಟ್ಸ್ ತಂತ್ರಾAಶದಲ್ಲಿ ರೈತರ ಎಲ್ಲಾ ಭೂ-ಹಿಡುವಳಿಗಳ ಪಹಣಿ ಜೋಡಣೆ ಮಾಡುವುದು ಅತ್ಯವಶ್ಯಕವಾಗಿದೆ.

ಈಗಾಗಲೇ ಎಫ್‌ಐಡಿ ಹೊಂದಿದ ರೈತರು ತಮ್ಮ ಎಲ್ಲಾ ಭೂ-ಹಿಡುವಳಿಗಳ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವAತೆ ಜಿಲ್ಲಾಕಾರಿ ಕೆ.ಎಂ.ಜಾನಕಿ ರೈತರಲ್ಲಿ ಕೋರಿದ್ದಾರೆ.

";