ಬೆಂಗಳೂರು: “ಯತೀಂದ್ರ ಸಿದ್ದರಾಮಯ್ಯ ಸೂಕ್ಷ್ಮ ಸ್ವಭಾವದ ವ್ಯಕ್ತಿ ಹಾಗೂ ಉದ್ಭವವಾಗುತ್ತಿರುವ ನಾಯಕ. ಅವರಿಗೆ ಸಹಕಾರ ಕೊಡೋಣ’’ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಹಾಸನದ ಹೊಳೆನರಸೀಪುರದ ಹಳ್ಳಿಯೊಂದರಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಯಾಗಿ ಡಿಕೆಶಿಯವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.ಹೊಳನರಸೀಪುರದ ಅಣ್ಣೆಚಾಕನಹಳ್ಳಿಯಲ್ಲಿ ನಡೆದಿದ್ದ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ವೇಳೆ ಮಾತನಾಡಿರುವ ಯತೀಂದ್ರ, “ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸಲಿದೆ.
ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದರೆ, ಸಿದ್ದರಾಮಯ್ಯನವರೇ 5 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನ ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ಬುಧವಾರ ಮಾತನಾಡಿದ ಡಿಕೆಶಿ, “ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ,ನಮ್ಮ ಸರ್ಕಾರ ಬಲಿಷ್ಠವಾಗಿದೆ,ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ.ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡ್ತೀವಿ’’ ಎಂದು ಸೂಚಿಸಿದರು.