ಹಾವೇರಿ: ಇಲ್ಲಿನ ಹಾನಗಲ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ರೇಪ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಮಾಹಿತಿ ರಳಿದು ಬಂದಿದೆ.
ಹಾನಗಲ್ನಲ್ಲಿ ಗ್ಯಾಂಗ್ರೇಪ್ ಪ್ರಕರಣಬಹಿರಂಗಗೊಂಡಿದ್ದು, ನೈತಿಕ ಪೊಲೀಸ್ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIT ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ
.ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಆರೋಪ ಮಾಡಿದ್ದಾರೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಆಗಿದೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣ ಹೊರಗೆ ಬರ್ತಿವೆ. ಇಂತಹ ಗ್ಯಾಂಗ್ ನಿರಂತರವಾಗಿ ಆ್ಯಕ್ಟೀವ್ ಆಗಿದೆ.
ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಆಡಳಿತ ವ್ಯವಸ್ಥೆ, ಸರ್ಕಾರ ರೇಪಿಸ್ಟ್ಗಳ ಜೊತೆ ನಿಂತಿದೆ. SITಗೆ ಕೊಡಿ ಅಂದ್ರೂ ಸರ್ಕಾರ ಕೊಡ್ತಿಲ್ಲ. ಪೋಸ್ಕೋ ಕೇಸ್ನಲ್ಲಿ ಕೇಸ್ ದಾಖಲು ಮಾಡಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.