ಚಿಕ್ಕಬಳ್ಳಾಪುರ: ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಮೃತ ಹಸ್ತದಿಂದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ.
ರಾಮ ಮಂದಿರ ಪ್ರಾಣಪ್ರತಿಷ್ಠೆ ಹಾಗೂ ಪೂಜಾ ವಿಧಿವಿಧಾನ ಪೂರೈಸಿದ ಪ್ರಧಾನಿ ಮೋದಿ, ರಾಮ ಮಂದಿರ ಆವರಣದಲ್ಲಿ ಆಯೋಜಿಸದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದು, ಸ್ವಾಮೀಜಿಗಳು ಪ್ರಧಾನಿ ಮೋದಿಗೆ ಶ್ರೀರಾಮನ ಪ್ರಸಾದ ನೀಡಿ ಕಠಿಣ ವೃತ ಪೂರ್ಣಗೊಳಿಸಿದ್ದಾರೆ.
ನರೇಂದ್ರ ಮೋದಿ ಉಪವಾಸ ಮಾಡಿದ್ದೇ ಅನುಮಾನ ಎಂದು ಮಾಜಿ ಮುಖ್ಯಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಪ್ಪ ಮೊಯ್ಲಿ, ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ.
11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವೈದ್ಯರ ಅಭಿಪ್ರಾಯದ ಪ್ರಕಾರ ಅದು ಅಸಾಧ್ಯ. ಉಪವಾಸ ಅಂತ ಹೇಳಿ ಮೋದಿ ಬಹಳ ಜೋರಾಗಿ ಒಡಾಡಿದ್ರು. ಉಪವಾಸ ಇದ್ದ ಹಾಗೆ ನರೇಂದ್ರ ಮೋದಿ ಕಾಣಲಿಲ್ಲ. ದೇವರಿಗೆ ಇಚ್ಛೆ ಪ್ರಕಾರ ಏನು ಬೇಕಾದರೂ ಮಾಡಲಿ. ಅದ್ರೆ ಇವರ ನಾಟಕ ಇನ್ನೂ ಮುಂದೆ ನಡೆಯಲ್ಲ ಎಂದರು.
ಗುಜರಾತ್ ಹತ್ಯಾಕಾಂಡದ ವೇಳೆ ಮೋದಿ ರಾಜಧರ್ಮ ಪಾಲನೆ ಮಾಡಲಿಲ್ಲ. ಕಾನೂನು ಪರಿಪಾಲನೆ ಮಾಡಲಿಲ್ಲ. ರಾಜಧರ್ಮ ಪಾಲನೆ ಮಾಡದೆ ಶ್ರೀರಾಮನ ಗರ್ಭಗುಡಿಯಲ್ಲಿ ಕೂತು ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ವಿಪರ್ಯಾಸ. ನಾನು ಬೆಳಿಗ್ಗೆ ವಾಕಿಂಗ್ ಮಾಡುವಾಗ ಡಾಕ್ಟರ್ ಬಳಿ ಚರ್ಚೆ ಮಾಡಿದೆ. 11 ದಿನ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಒಂದು ವೇಳೆ ಮನುಷ್ಯ ಬದುಕಿದ್ರೆ ಪವಾಡ ಎಂದರು.