ಬೆಂಗಳೂರು:
ರಾಜ್ಯದಲ್ಲಿ 27 ಬಿಜೆಪಿ ಸಂಸದರಿದ್ದಾರೆ, ಆದರೆ ಇವರು ಬರೀ ಓಳು ಹಾಗೂ ರಾಜ್ಯದ ಪಾಲಿಗೆ ಬಂದಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ಆರಂಭಿಸಿದ್ದಾರೆ.
ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ ಪಡಿಸಿದ್ದನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತದೆ ಗುಡುಗಿದರು.
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗಿದೆ, ರಾಜ್ಯದಲ್ಲಿ ಬರಪರಿಹಾರಕ್ಕೆ ಮನವಿ ಮಾಡಿದರೂ ಪರಿಹಾರ ನೀಡಿಲ್ಲ. ನಮ್ಮ ಮನವಿಯಲ್ಲಿ ತೀರ್ಮಾನ ತೆಗೆದುಕೊಳ್ಳದೆ ಅನ್ಯಾಯ ಮಾಡಿದ್ದಾರೆ ನಾಲಾಯಕ್ ಸಂಸದರಿಂದ ರಾಜ್ಯಕ್ಕೆ ಅನ್ಯಾಯವೇ ಲಾಭ ಇಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಕೃಷ್ಣ ಬೈರೇಗೌಡ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.
ಬಡ ಜನರ ನ್ಯಾಯಕ್ಕಾಗಿ ಆಂದೋಲನದ ದಮನಕ್ಕೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಬಿಜೆಪಿ ಬಂದ ಬಳಿಕ ಪ್ರತಿಯೊಂದು ಸ್ವಾತಂತ್ರ್ಯ ಕಸಿದುಕೊಳ್ಳಲು ಪ್ರಯತ್ನ ನಡೆಯುತ್ತಿದೆ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಗಳಿಸಿದ ಸ್ವಾತಂತ್ರ್ಯವನ್ನು ಬಿಜೆಪಿ ಕಿತ್ತುಕೊಳ್ಳುತ್ತಿದೆ, ಬಿಜೆಪಿ ಆಡಳಿತದಲ್ಲಿ ಬಡವರು, ಶ್ರೀಮಂತರು ಶ್ರೀಮಂತರಾಗಿದ್ದಾರೆ. ಬಡವರು, ರೈತರ ಪರಿಸ್ಥಿತಿ ಕಷ್ಟವಾಗಿದೆ ಎಂದು ಕಿಡಿಕಾರಿದರು.
ರಾಹುಲ್ ಯಾತ್ರೆಗೆ ಅಸ್ಸಾಂನಲ್ಲಿ ಉದ್ದೇಶಪೂರ್ವಕವಾಗಿ ಅಡ್ಡಿ ಉಂಟು ಮಾಡಿದ್ದು, ಅಧಿಕಾರ ದುರುಪಯೋಗ ಮಾಡಿಕೊಂಡು ಬಿಜೆಪಿ ನ್ಯಾಯಯಾತ್ರೆ ದಮನಕ್ಕೆ ಪ್ರಯತ್ನ ಮಾಡಿದೆ. ಬಿಜೆಪಿಯಿಂದ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದರೆ, ರಾಜಕೀಯ ಕಾರಣಕ್ಕಾಗಿ ಅಧಿಕಾರ ದುರುಪಯೋಗ ಮಾಡಲಾಗುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾರಿನ ಮೇಲೆ ದಾಳಿ ಮಾಡಿ ಗೂಂಡಾಗಿರಿ ನಡೆಸಲಾಗಿದೆ ಎಂದು ವಿವರಿಸಿದರು.