ಬೆಂಗಳೂರು: ಜಗದೀಶ್ ಶೆಟ್ಟರ್ ಪಕ್ಷ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅವರು ಧ್ವಜಾರೋಹಣ ನೆರವೇರಿಸಿದರು.
ಮುನ್ನ ಅವರು ಡಿಕೆ ಶಿವಕುಮಾರ್ಗೆ ಎಚ್ಚರಿಕೆ ನೀಡಿ,ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಬೇಕು. ಅವರ ಹಿನ್ನೆಲೆ, ಸಿದ್ಧಾಂತ ಏನೆಂದು ಅರಿತುಕೊಳ್ಳಬೇಕು. ಪಕ್ಷಕ್ಕೆ ನಿಷ್ಠಾವಂತರು ಮಾತ್ರ ಬರಬೇಕು.
ಹೀಗೆ ಬಂದರು, ಹಾಗೆ ಹೋದರು ಅಂತ ಆಗಬಾರದು. ಅವರ ತತ್ವಗಳ ಆಧಾರದ ಮೇಲೆ ಸೇರ್ಪಡೆ ಮಾಡಿಕೊಳ್ಳಿ ಎಂದು ರಾಜ್ಯ ನಾಯಕರಿಗೆ ಖರ್ಗೆ ಕಿವಿಮಾತು ಹೇಳಿದರು.