ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಬಿಹಾರವನ್ನು ತಲುಪಿದೆ. ಮೊದಲು ಕಿಶನ್‌ಗಂಜ್ ತಲುಪಿದ್ದು, ಇದನ್ನು ಕಾಂಗ್ರೆಸ್ನ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದು, ರಾಹುಲ್ ಅವರ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಮೂಲಕ ಬಿಹಾರ ತಲುಪಿದೆ. ನಂತರ ರಾಹುಲ್ ನಾಲ್ಕು ದಿನಗಳಲ್ಲಿ ಏಳು ಜಿಲ್ಲೆಗಳಲ್ಲಿ 425 ಕಿಲೋಮೀಟರ್ ಪ್ರಯಾಣಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ದೇಶದಲ್ಲಿ ಮೋದಿಯವರ ಸುನಾಮಿ ಎದ್ದಿತ್ತು ಮತ್ತು ಮೋದಿ ಅಲೆಯಲ್ಲಿ ಬಿಹಾರದಲ್ಲಿ 40ರಲ್ಲಿ 39 ಸ್ಥಾನಗಳಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿತ್ತು.ಏಕೈಕ ಕಿಶನ್‌ಗಂಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ ಮೊಹಮ್ಮದ್ ಜಾವೇದ್ ಅವರು ಮಹಾಮೈತ್ರಿಕೂಟವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಆದರೆ ಈ ಬಾರಿ ಈ ಸ್ಥಾನವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಸಾಕಷ್ಟು ಹರಸಾಹಸ ಪಡಬೇಕಾಗಿದೆ.
ನ್ಯಾಯ ಯಾತ್ರೆಗೆ ಸಂಬಂಧಿಸಿದಂತೆ ಇಡೀ ನಗರವು ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳಿಂದ ತುಂಬಿ ಹೋಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರು ಕಮಾನುಗಳು ಮತ್ತು ಬೃಹತ್ ಹೋರ್ಡಿಂಗ್‌ಗಳನ್ನು ಅಳವಡಿಸಿದ್ದಾರೆ. ರಾಹುಲ್ ಗಾಂಧಿ ಇಂದು ಯಾದವ ಕಾಲೇಜಿನಲ್ಲಿ ಉಳಿದುಕೊಳ್ಳಲಿದ್ದಾರೆ.2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮೊಹಮ್ಮದ್ ಜಾವೇದ್ ಕಿಶನ್‌ಗಂಜ್ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು.