ಬೆಂಗಳೂರು: ಹರ್ ಘರ್ ತಿರಂಗ ಎಂದವರಿಗೆ ಈಗೇನಾಯಿತು? ಎಂದು ಬಿಜೆಪಿ ವಿರುದ್ಧ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿಮಿಡಿಗೊಂಡರು.
ಮಂಡ್ಯ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ಹರ್ ಘರ್ ತಿರಂಗ ಎಂದು ಬಿಜೆಪಿಗರು ಮನೆ ಮನೆಗೆ ತಿರಂಗ ಹಂಚಿದ್ದರು. ಏನಾಯಿತು ಅದು ಹೀಗೆ ಯಾಕೆ ತಿರಂಗ ಬಿಟ್ರು ಎಂದು ಪ್ರಶ್ನಿಸಿದರು.ಕೇಂದ್ರದಲ್ಲಿ ಬಿಜೆಪಿ ಅವರೇ ಅಧಿಕಾರದಲ್ಲಿ ಇದ್ದಾರೆ. ತಿರಂಗವನ್ನು ಬಿಟ್ಟು ಹನುಮ ಧ್ವಜವನ್ನೇ ಕಾನೂನಿನ ಮೂಲಕ ತಂದು ಬಿಡಲಿ ಎಂದರು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಹೀಗೆಲ್ಲಾ ಮಾಡ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಬದುಕುತ್ತಾರೆ. ಎಲ್ಲಾ ಜಾತಿ, ವರ್ಗದವರು ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದರು. ಮಂಡ್ಯದಲ್ಲಿ ಹನುಮ ಧ್ವಜ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿಯಾದ ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿ, ‘ ಕುಮಾರಸ್ವಾಮಿ ಅವರು ಅವರ ಪಕ್ಷವನ್ನು ಬಿಜೆಪಿ ಜೊತೆಗೆ ಮರ್ಜ್ ಮಾಡಿಕೊಳ್ಳುವ ರೀತಿಯಲ್ಲಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ವರು ಏನು ಬೇಕಾದರೂ ಮಾಡಿಕೊಳ್ಳಲಿ ಅದು ಅವರ ಪಕ್ಷದ ವಿಚಾರ. ನಮಗೂ ಅದಕ್ಕೂ ಸಂಬಂಧವಿಲ್ಲ. ಯಾವ ಬಣ್ಣದ ಬಾವುಟ ಬೇಕಾದರೂ ಹಾಕಿಕೊಳ್ಳಲಿ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ರಾಜಕಾರಣದ ಬೇಸ್ ಇಲ್ಲ’.ಈಗ ಹೊಸ ಪ್ರಯೋಗ ಮಾಡುತ್ತಿದ್ದಾರೆ. ಏನು ಬೇಕಾದರೂ ಮಾಡಿಕೊಳ್ಳಲಿ. ಮಂಡ್ಯದ ಕೆರಗೋಡಿನಲ್ಲಿ ಕನ್ನಡ ,ರಾಷ್ಟ್ರ ಧ್ವಜ ಬಿಟ್ಟು ಬೇರೆಯದಕ್ಕೆ ಅವಕಾಶ ಇಲ್ಲ ಎಂದು ಕೇಳಿಕೊಂಡಿದ್ದಾರೆ ಎಂದು ಸೂಚಿಸಿದರು.