ದೆಹಲಿ: ಬಜೆಟ್ ಹಂಚಿಕೆಯಲ್ಲಿ ಪಕ್ಷಪಾತ ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ಅವರು ದಕ್ಷಿಣದ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಹೇಳಿಕೆ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಹೇಳಿದ್ದು, ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಜೋಶಿ, ಕಾಂಗ್ರೆಸ್ ಸದಸ್ಯ ಸುರೇಶ್ ಅವರು ದಕ್ಷಿಣ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಟ್ಟಿದ್ದರು.
ಈ ಹೇಳಿಕೆಯು ಸಂವಿಧಾನ ಮತ್ತು ಅದರ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ.ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ವಿಷಯವನ್ನು ಲೋಕಸಭೆಯ ನೈತಿಕ ಸಮಿತಿಗೆ ಉಲ್ಲೇಖಿಸಬೇಕೆಂದುಒತ್ತಾಯಿಸುತ್ತೇನೆ ಎಂದಿದ್ದು, ಸೋನಿಯಾ ಗಾಂಧಿಯವರು ಕ್ಷಮೆಯಾಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದರು.
ಇದು ಸಂಸದರಾಗಿ ಪ್ರಮಾಣ ವಚನದ ಉಲ್ಲಂಘನೆಯಾಗಿದ್ದು, ಈ ವಿಷಯವನ್ನು ನೈತಿಕ ಸಮಿತಿಗೆ ಕಳುಹಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು. ಅವರು ಮಾಡದಿದ್ದರೆ ನೀವೂ ದೇಶದ ತುಕಡೇ ತುಕಡೆಯಲ್ಲಿ ಭಾಗಿಯಾಗಿದ್ದೀರಿ ಎಂದು ದೇಶ ನಂಬುತ್ತದೆ ಎಂದು ವಿವರಿಸಿದರು.