This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಒಂದೇ ಇಲಾಖೆಯಲ್ಲಿ 7000 ಹುದ್ದೆ ಭರ್ತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ

ಒಂದೇ ಇಲಾಖೆಯಲ್ಲಿ 7000 ಹುದ್ದೆ ಭರ್ತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ

ರಾಜ್ಯ ಸರ್ಕಾರದ ಹಲವು ಇಲಾಖೆಗಳ ಪೈಕಿ, ಇದೀಗ ಒಂದೇ ಇಲಾಖೆಯಲ್ಲಿ 7000 ಹುದ್ದೆ ಭರ್ತಿ ಮಾಡುವ ಕುರಿತ ಭರ್ಜರಿ ಸಿಹಿ ಸುದ್ದಿ ಒಂದು ಕೇಳಿ ಬಂದಿದೆ.

ರಾಜ್ಯದಾದ್ಯಂತ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಬರೋಬರಿ 7000 ಪೋಸ್ಟ್‌ಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಮೊನ್ನೆಯಷ್ಟೆ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

5 ವರ್ಷಗಳಲ್ಲಿ ಕಾಲೇಜುಗಳ ಸಂಖ್ಯೆ ಜತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಹೊಸ ಕೋರ್ಸ್‌ಗಳು ಸಹ ಆರಂಭವಾಗಿವೆ. ಆದರೆ ಇವುಗಳ ಬೋಧನೆಗೆ ಅಗತ್ಯ ಬೋಧಕರು ಮತ್ತು ಸಿಬ್ಬಂದಿಗಳ ಕೊರತೆ ಇದ್ದು, ನೇಮಕ ಮಾಡಿಲ್ಲ. ಆದ್ದರಿಂದ ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ್ದಾರೆ.ಪ್ರಸ್ತುತ ವಿದ್ಯಾರ್ಥಿಗಳ ಶಿಕ್ಷಣ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು, ಕಾರ್ಯಾಭಾರ ನಡೆಸಲಾಗುತ್ತಿದೆ. ಆರ್ಥಿಕ ಇಲಾಖೆ ಎಷ್ಟು ಬೇಗ ಒಪ್ಪಿಗೆ ನೀಡುತ್ತದೋ ಅಷ್ಟು ಬೇಗನೇ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಕಳೆದ ಬಿಜೆಪಿ ಸರ್ಕಾರದಲ್ಲಿ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರದಲ್ಲಿ 7000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಕುರಿತು ಶಿಕ್ಷಣ ಸಚಿವರು ಹೇಳಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";