This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Education NewsHealth & FitnessLocal NewsNational NewsPolitics NewsState News

ಸರಕಾರದ ಸೌಲಭ್ಯಗಳ ಸದುಪಯೋಗಕ್ಕೆ ಶಾಸಕ ಮೇಟಿ ಕರೆ

ಸರಕಾರದ ಸೌಲಭ್ಯಗಳ ಸದುಪಯೋಗಕ್ಕೆ ಶಾಸಕ ಮೇಟಿ ಕರೆ

 

ಬಾಗಲಕೋಟೆ

ರಾಜ್ಯ ಸರಕಾರ ರೂಪಿಸುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡು ಸುಖಮಯ ಜೀವನಕ್ಕೆ ಮುನ್ನುಡಿ ಬರೆಯಬೇಕೆಂದು ಶಾಕಸರೂ ಆಗಿರುವ ಬಿಟಿಡಿಎ ಸಭಾಪತಿ ಎಚ್.ವೈ. ಮೇಟಿ ಅವರು ಕರೆ ನೀಡಿದ್ದಾರೆ.

ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಜಿಲ್ಲಾ ಕಾನಿಪ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ನಡೆದ ಪತ್ರಿಕಾ ವಿತರಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಇ-ಶ್ರಮ ಕಾರ್ಡ ನೋಂದಣಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ಐವರಿಗೆ ಇ-ಶ್ರಮ ಕಾರ್ಡ ವಿತರಿಸಿ ಮಾತನಾಡಿದ ಅವರು ಬೆಳಿಗ್ಗೆ ಎಲ್ಲ ಓದುಗರಿಗೆ ನಿತ್ಯದ ಮಾಹಿತಿ ಒದಗಿಸುವ ಪೇಪರ್ ಬಾಯ್ಸï ಕಾರ್ಯ ಶ್ಲಾಘನೀಂiÀ, ಅವರ ಸಾಮಾಜಿಕ ಸೇವೆ ಸ್ಮರಣನೀಯ, ಅದಕ್ಕೆ ಬೆಲೆ ಕಟ್ಟಲಾಗದು ಎಂದರು.

ಸರಕಾರದ ಸೌಲಭ್ಯಗಳನ್ನು ಕಲ್ಪಿಸುತ್ತಿರುವ ಕಾರ್ಮಿಕ ಇಲಾಖೆ ಮತ್ತು ಕಾನಿಪ ಸಂಘದ ಕಾರ್ಯ ಶ್ಲಾಘನೀಯ, ಈ ದಿಸೆಯನ್ನು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಅಪಘಾತಗಳಾಗದಂತೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸುರಕ್ಷಿತ ಸಂಚಾ ಹಾಗೂ ಸುರಕ್ಷಿತ ಬದುಕಿಗೆ ಮುಂದಾಗುವ ಮೂಲಕ ಕುಟುಂಬ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಹೇಳಿ ಇಂತಹ ಜನಪರ ಕಾರ್ಯಕ್ರಮಗಳಿಗೆ ತಮ್ಮ ನೆರವು ಸದಾ ಇರುತ್ತದೆ ಎಂದರು.

ಇ-ಶ್ರಮ ಕಾರ್ಡಗಳನ್ನು ವಿತರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಅವರು ಮಾತನಾಡಿ ಬದುಕಿನಲ್ಲಿ ಸಿಗುವ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು, ಅಘಾತವಾಗದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡು ಕುಟುಂಬದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದರು.

ಜಿಲ್ಲಾ ಹೆಚ್ಚುವರಿ ಪೋಲೀಸ ವರಿಷ್ಠಾಧಿಕಾರಿ ಪ್ರಸನ್ ದೇಸಾಯಿ  ಅವರು ಮಾತನಾಡಿ ೨೦೨೩ ರ ಒಂದೇ ವರ್ಷದಲ್ಲಿ ಸಾಕಷ್ಟು ಅಪಘಾತ ಸಂಭವಿಸಿ ೪೧೦ ಜನರು, ೮೦೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿವರಿಸಿ ಅದಕ್ಕಾಗಿ ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಬೇಕೆಂದು ಕಿವಿಮಾತು ಹೇಳಿ ಪೋಲೀಸ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದಕೊಂಡು ಸುಖಮಯ ಕುಟುಂಬಮಯ ಜೀವನಕ್ಕೆ ಆದ್ಯತೆ ನೀಡಬೇಕೆಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ತರನಂ ಬೆಂಗಾಲಿ ಅವರು ಮಾತನಾಡಿ ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ವಿವರಿಸಿ ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಇನ್ನೋರ್ವ ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸಿಂದಗಿ ಮಾತನಾಡಿದರು. ಜಿಲ್ಲಾ ಕಾನಿಪ ಅಧ್ಯP್ಷÀ ಆನಂದ ಧಲಬಂಜನ ಅವರು ಮಾತನಾಡಿ ಪತ್ರಿಕಾ ವಿತರಕರಿಗೆ ಇ-ಶ್ರಮ ಕಾರ್ಡಗಳ ಸೌಲಭ್ಯಗಳನ್ನು ಕಲ್ಪಿಸಿರುವ ಸರಕಾರದ ಕಾರ್ಯ ಜನಪರವಾಗಿದ್ದು ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಸಂಘಟಿತ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್‌ಟಾಪ್‌ಗಳನ್ನು ಹಾಗೂ ಇ-ಶ್ರಮ ಕಾರ್ಡಗಳನ್ನು ಗಣ್ಯರು ವಿತರಿಸಿದರು. ಅಲ್ಲದೇ ರೆಡ್‌ಕ್ರಾಸ್ ಸಂಸ್ಥೆಯ ಆನಂದ ಜಿಗಜಿನ್ನಿ ಅವರು ವೈದ್ಯಕೀಯ ಸೌಲಭ್ಯಗಳ ಸುರಕ್ಷಿತ ಕಿಟï‌ಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಕಾನಿಪ ಸಂಘದ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಕಾಶ ಬಾಳಕ್ಕನವರ ಅವರನ್ನು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಅವರು ಸನ್ಮಾನಿಸಿದರು. ವೇದಿಕೆಯಲ್ಲಿ ರಾಜ್ಯ ಕಾನಿಪ ಸಂಘದ ರಾಜ್ಯ ಸಮಿತಿಯ ಸದಸ್ಯ ಮಹೇಶ ಅಂಗಡಿ, ಜಿಲ್ಲಾ ಖಜಾಂಚಿ ಜಗದೀಶ ಗಾಣಿಗೇರ, ಪತ್ರಿಕಾ ವಿತರಕರು, ಪತ್ರಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಕಾನಿಪ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಎಸ್. ಕಲ್ಯಾಣಿ ಸ್ವಾಗತಿಸಿದರು. ಪತ್ರಕರ್ತ ಶ್ರೀಶೈಲ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಬಾಳಕನ್ನವರ ನಿರೂಪಿಸಿದ ಕಾರ್ಯಕ್ರಮವನ್ನು ಸಂತೋಷ ದೇಶಪಾಂಡೆ ವಂದಿಸಿದರು.

Nimma Suddi
";