ದೆಹಲಿ: ಮಾಜಿ ಪ್ರಧಾನಿಗಳಾದ ನರಸಿಂಹರಾವ್ ಚೌಧರಿ ಚರಣ್ ಸಿಂಗ್ ಮತ್ತು ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ ಕುರಿತು ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ನಾನು ಆ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದರು.
ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮೂರು ವಿಭಿನ್ನ ಪೋಸ್ಟ್‌ಗಳ ಮೂಲಕ ಮೂವರು ದಿಗ್ಗಜರ ಕೊಡುಗೆಯನ್ನು ಸ್ಮರಿಸಿದ್ದು, ಲಾಲ್ ಕೃಷ್ಣ ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ನಂತರ ಇಂದು ಮೂವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಆಗಿದ್ದು ಈ ವರ್ಷ ಒಟ್ಟು ಐದು ಜನರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.
ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಅದೃಷ್ಟವಾಗಿದ್ದು, ಈ ಗೌರವವು ದೇಶಕ್ಕೆ ಅವರ ಅನುಪಮ ಕೊಡುಗೆಗೆ ಸಮರ್ಪಿತವಾಗಿದೆ ಎಂದು ಪ್ರಧಾನಿ ಮೋದಿ ಅವರು ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಾರೆ. ನರಸಿಂಹ ರಾವ್ ಬಗ್ಗೆ ಟ್ವೀಟ್ ಮಾಡಿದ ಮೋದಿ, “ನರಸಿಂಹರಾವ್ ಅವರ ಅವಧಿ ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದು, ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಉತ್ತೇಜಿಸುವ ಮಹತ್ವದ ಕ್ರಮಗಳಿಂದ ಗುರುತಿಸಲಾಗಿದೆ ಎಂದಿದ್ದಾರೆ
.